ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಗಮನಾರ್ಹವಾಗಿ ಸುಧಾರಿಸಿದೆ ಮತ್ತು ಈ ವರ್ಷ ಅತಿ ಹೆಚ್ಚು 1.88 ಕೋಟಿ ಪ್ರವಾಸಿಗರು ಕಣಿವೆಗೆ ಭೇಟಿ ನೀಡಿದ್ದಾರೆ ಎಂದು ಜಮ್ಮು-ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಬಜೆಟ್ ಅಂಗೀಕಾರದ ಕುರಿತು ಬುಧವಾರ ಜಮ್ಮುವಿನಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವು ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ, ಅಮೃತ ಸರೋವರ, SVAMITVA ಯೋಜನೆಯಂತಹ ಯೋಜನೆಗಳ ಅನುಷ್ಠಾನದಲ್ಲಿ ದೇಶದಲ್ಲೇ ಅತ್ಯುತ್ತಮ ಸಾಧನೆ ಮಾಡಿದೆ ಎಂದು ಹೇಳಿದರು.
ಕಳೆದ ವರ್ಷ ಜಮ್ಮು-ಕಾಶ್ಮೀರ 14.64% ಆರ್ಥಿಕ ಬೆಳವಣಿಗೆಯನ್ನು ಕಂಡಿದೆ ಮತ್ತು ತೆರಿಗೆ ಆದಾಯವು ಶೇಕಡಾ 31 ರಷ್ಟು ಬೆಳವಣಿಗೆಯನ್ನು ತೋರಿಸಿದೆ ಎಂದರು.
2023-24ರ ಜಮ್ಮು-ಕಾಶ್ಮೀರ ಬಜೆಟ್ ಅನ್ನು ಬೆಳವಣಿಗೆ ಆಧಾರಿತ ಬಜೆಟ್ ಎಂದು ಹೇಳಿದ ಲೆಫ್ಟಿನೆಂಟ್ ಗವರ್ನರ್, 1,06,061 ಕೋಟಿ ರೂಪಾಯಿಗಳ ಬಜೆಟ್ ನೀಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಹಣಕಾಸು ಸಚಿವರಿಗೆ ಕೃತಜ್ಞತೆ ಸಲ್ಲಿಸಿದರು.
ಜಮ್ಮು-ಕಾಶ್ಮೀರ G20 ಸಭೆಯನ್ನು ಆಯೋಜಿಸುತ್ತಿರುವ ಕುರಿತು ಮಾತನಾಡಿದ ಲೆಫ್ಟಿನೆಂಟ್ ಗವರ್ನರ್, G20 ಸಭೆಯ ಯಶಸ್ಸನ್ನು ಖಚಿತಪಡಿಸಿಕೊಳ್ಳಲು ತಮ್ಮ ಆಡಳಿತದಿಂದ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಈ ಪ್ರತಿಷ್ಠಿತ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮತ್ತು ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡುವ G20 ಪ್ರತಿನಿಧಿಗಳಿಗೆ ಸ್ಮರಣೀಯವಾಗಿಸಲು ಅವರು ಎಲ್ಲರ ಸಹಕಾರವನ್ನು ಕೋರಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.