ನವದೆಹಲಿ: ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಹೌರಾದಲ್ಲಿ ರಾಮನವಮಿ ಮೆರವಣಿಗೆ ವೇಳೆ ನಡೆದ ಹಿಂಸಾಚಾರದ ಘಟನೆಯಲ್ಲಿ ಕಲ್ಲು ತೂರಾಟ ನಡೆಸಿದವರಿಗೆ ಮಮತಾ ಕ್ಲೀನ್ ಚಿಟ್ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ.
ಹೌರಾದಲ್ಲಿ ರಾಮನವಮಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದೆ. ನ್ಯಾಯ ನೀಡುವ ಬದಲು ಮಮತಾ ಬ್ಯಾನರ್ಜಿ ಅವರು ಕಾನೂನನ್ನು ಕೈಗೆತ್ತಿಕೊಂಡು ರಾಮನವಮಿಯ ಶೋಭಾ ಯಾತ್ರೆ ಮೇಲೆ ದಾಳಿ ನಡೆಸಿದ ಕಲ್ಲುತೂರಾಟಗಾರರಿಗೆ ಕ್ಲೀನ್ ಚಿಟ್ ನೀಡಿದ್ದಾರೆ ಎಂದು ಇರಾನಿ ಆರೋಪಿಸಿದ್ದಾರೆ.
“ಮಮತಾ ಹಿಂದೂ ಸಮುದಾಯದ ಮೇಲೆ ಎಷ್ಟು ದಿನ ದಾಳಿ ನಡೆಸುತ್ತಾರೆ ಎಂಬುದು ಪ್ರಶ್ನೆ” ಎಂದು ಅವರು ಹೇಳಿದ್ದಾರೆ.
“ಇದು ಮಮತಾ ಅವಧಿಯಲ್ಲಿ ಸಂಭವಿಸಿದ ಮೊದಲ ಘಟನೆಯಲ್ಲ. ಈ ಹಿಂದೆ 2022 ರಲ್ಲಿ ಲಕ್ಷ್ಮಿ ಪೂಜೆಯಂದು ದಲಿತರು ಪೂಜೆ ಮಾಡುವಾಗ ಅವರ ಮೇಲೆಯೂ ಹಲ್ಲೆ ನಡೆಸಲಾಯಿತು. ಆ ಸಮಯದಲ್ಲೂ ಅವರು ಮೌನವಾಗಿದ್ದರು” ಎಂದಿದ್ದರು.
ಗುರುವಾರ ಮುಂಜಾನೆ, ರಾಮನವಮಿ ಆಚರಣೆಯ ವೇಳೆ ಹೌರಾದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಲಾಯಿತು. ಗಲಭೆಕೋರರು ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗಳನ್ನು ಧ್ವಂಸಗೊಳಿಸಿದರು ಮತ್ತು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.
ರಾಮನವಮಿ ಆಚರಣೆಯ ಸಂದರ್ಭದಲ್ಲಿ ಹೌರಾದಲ್ಲಿ ನಡೆದ ಹಿಂಸಾಚಾರದ ನಂತರ, ಪಶ್ಚಿಮ ಬಂಗಾಳ ಸರ್ಕಾರ ಶುಕ್ರವಾರ ತನಿಖೆಯನ್ನು ಅಪರಾಧ ತನಿಖಾ ಇಲಾಖೆಗೆ (ಸಿಐಡಿ) ಹಸ್ತಾಂತರಿಸಿದೆ. ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್, ಸಿಐಡಿ ಸುನಿಲ್ ಚೌಧರಿ ನೇತೃತ್ವದ ವಿಶೇಷ ತಂಡ ತನಿಖೆ ಆರಂಭಿಸಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ಬಗ್ಗೆ ಪಶ್ಚಿಮ ಬಂಗಾಳದ ರಾಜ್ಯಪಾಲ ಸಿವಿ ಆನಂದ ಬೋಸ್ ಅವರೊಂದಿಗೆ ಮಾತನಾಡಿದ್ದಾರೆ ಮತ್ತು ಹಿಂಸಾಚಾರ ಭುಗಿಲೆದ್ದ ಹೌರಾದಲ್ಲಿನ ಪರಿಸ್ಥಿತಿಯನ್ನು ಅವಲೋಕಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.