ಬೆಂಗಳೂರು: ಭಾರತ ಮತ್ತು ಇತರ ದೇಶಗಳ ಆಂತರಿಕ ವಿಷಯಗಳಲ್ಲಿ ಮಧ್ಯಪ್ರವೇಶಿಸುವ ಅಭ್ಯಾಸಕ್ಕಾಗಿ ಪಾಶ್ಚಿಮಾತ್ಯ ದೇಶಗಳ ವಿರುದ್ಧ ವಿದೇಶಾಂಗ ಸಚಿವ ಎಸ್ ಜೈಶಂಕರ್ ಭಾನುವಾರ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನ ಕಬ್ಬನ್ ಪಾರ್ಕ್ನಲ್ಲಿ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮತ್ತು ಬೆಂಗಳೂರು ಸೆಂಟ್ರಲ್ ಸಂಸದ ಪಿಸಿ ಮೋಹನ್ ಅವರು ಆಯೋಜಿಸಿದ್ದ ‘ಮೀಟ್ ಆ್ಯಂಡ್ ಗ್ರೀಟ್’ ಸಂವಾದದಲ್ಲಿ ಭಾಗವಹಿಸಿದ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಅವರ ಅನರ್ಹತೆಗೆ ಸಂಬಂಧಿಸಿದಂತೆ ಜರ್ಮನಿ ಮತ್ತು ಅಮೆರಿಕದ ಟೀಕೆಗಳ ಕುರಿತು ಪ್ರತಿಕ್ರಿಯಿಸಿ ಪಶ್ಚಿಮಾತ್ಯ ರಾಷ್ಟ್ರಗಳ ವಿರುದ್ಧ ವಾಗ್ದಾಳಿ ನಡೆಸಿದರು.
“ಪಾಶ್ಚಿಮಾತ್ಯ ದೇಶಗಳು ಇತರ ದೇಶಗಳ ಆಂತರಿಕ ವಿಷಯಗಳಲ್ಲಿ ಪ್ರತಿಕ್ರಿಯಿಸಲು ತಮಗೆ ದೈವದತ್ತ ಹಕ್ಕಿದೆ ಎಂದು ಭಾವಿಸುತ್ತವೆ. ಅವರು ಇತರರ ಬಗ್ಗೆ ಪ್ರತಿಕ್ರಿಯೆ ನೀಡುವ ಕೆಟ್ಟ ಅಭ್ಯಾಸವನ್ನು ಹೊಂದಿದ್ದಾರೆ, ಇವರು ಇದನ್ನು ಮಾಡುತ್ತಲೇ ಇದ್ದರೆ, ಇತರ ಜನರು ಕೂಡ ಅವರ ಬಗ್ಗೆ ಕಾಮೆಂಟ್ ಮಾಡಲು ಪ್ರಾರಂಭಿಸುತ್ತಾರೆ. ಆದರೆ ಆಗ ಅವರು ಅದನ್ನು ಇಷ್ಟಪಡುವುದಿಲ್ಲ ಎಂಬುದನ್ನು ಅವರು ಅನುಭವದಿಂದ ಕಲಿಯಬೇಕಾಗುತ್ತದೆ. ಇಂತಹ ಸನ್ನಿವೇಶ ಸಂಭವಿಸುವುದನ್ನು ನಾವು ಖಂಡಿತ ನೋಡುತ್ತೇವೆ” ಎಂದಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವಿರುದ್ಧ ವಾಗ್ದಾಳಿ ನಡೆಸಿದ ಅವರು, ನಿಮ್ಮ ಬಗ್ಗೆ ಪ್ರತಿಕ್ರಿಯಿಸಲು ಜನರನ್ನು ಆಹ್ವಾನಿಸುವುದನ್ನು ನಿಲ್ಲಸಬೇಕು ಎಂದಿದ್ದಾರೆ
2019ರ ಮಾನನಷ್ಟ ಮೊಕದ್ದಮೆಯಲ್ಲಿ ದೋಷಾರೋಪಣೆಯಾದ ನಂತರ ರಾಹುಲ್ ಗಾಂಧಿ ಅವರನ್ನು ಲೋಕಸಭೆಯ ಸದಸ್ಯರಾಗಿ ಅನರ್ಹಗೊಳಿಸಿದ ನಂತರ, ಯುಎಸ್ ಮತ್ತು ಜರ್ಮನಿಯ ಅಧಿಕೃತ ವಕ್ತಾರರು ರಾಹುಲ್ ಬೆಂಬಲಕ್ಕೆ ನಿಂತು ಮಾತನಾಡಿದ್ದವು. ಇದಕ್ಕೆ ಭಾರೀ ಆಕ್ರೋಶಗಳು ವ್ಯಕ್ತವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.