ನವದೆಹಲಿ: ಈಶಾನ್ಯ ರಾಜ್ಯವು ಪ್ರಮುಖ ಪ್ರವಾಸಿ ತಾಣವಾಗಿ ಹೊರಹೊಮ್ಮುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.
ಇಂದು ಟ್ವೀಟ್ ಮಾಡಿರುವ ಮೋದಿ, ಹೆಚ್ಚಿದ ಪ್ರವಾಸೋದ್ಯಮ ಎಂದರೆ ಈ ಪ್ರದೇಶದಲ್ಲಿ ಹೆಚ್ಚಿದ ಸಮೃದ್ಧಿ ಎಂದರ್ಥ ಎಂದಿದ್ದಾರೆ. ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಜಿ ಕಿಶನ್ ರೆಡ್ಡಿ ಅವರ ಟ್ವೀಟ್ಗೆ ಪ್ರತಿಕ್ರಿಯೆ ನೀಡಿದ ಸಂದರ್ಭ ಪ್ರಧಾನಿ ಈ ವಿಷಯ ತಿಳಿಸಿದರು.
ಕಳೆದ ವರ್ಷದಲ್ಲಿ 11.8 ಮಿಲಿಯನ್ ದೇಶೀಯ ಪ್ರವಾಸಿಗರು ಮತ್ತು ಒಂದು ಲಕ್ಷಕ್ಕೂ ಹೆಚ್ಚು ಅಂತರಾಷ್ಟ್ರೀಯ ಪ್ರಯಾಣಿಕರನ್ನು ಆಕರ್ಷಿಸುವ ಮೂಲಕ ಈಶಾನ್ಯ ಪ್ರವಾಸೋದ್ಯಮವು ದಾಖಲೆ ಮುರಿಯುತ್ತಿದೆ. ಈಶಾನ್ಯ ಮೋದಿ ಸರ್ಕಾರದ ಬದ್ಧತೆಗೆ ಇದು ಸಾಕ್ಷಿಯಾಗಿದೆ ಎಂದು ರೆಡ್ಡಿ ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದ ಬಳಿಕ ಈಶಾನ್ಯ ರಾಜ್ಯಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದ್ದಾರೆ. ಅಲ್ಲಿ ಹಿಂದೆಂದಿಗಿಂತಲೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ಪ್ರಸ್ತುತ ನಡೆಯುತ್ತಿದೆ. ಹೀಗಾಗಿಯೇ ಪ್ರವಾಸೋದ್ಯಮ ಕೂಡ ಅಲ್ಲಿ ಗರಿಗೆದರುತ್ತಿದೆ. ದೇಶದ ಮೂಲೆ ಮೂಲೆಯ ಜನರು ಈಶಾನ್ಯದ ಸೌಂದರ್ಯವನ್ನು ಕಣ್ತುಂಬಿಕೊಳ್ಳುವ ಕನಸು ಕಾಣುತ್ತಿದ್ದಾರೆ.
Gladdening trend. Increased tourism means increased prosperity in the region. https://t.co/hCwjqEef0o
— Narendra Modi (@narendramodi) April 4, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.