ನವದೆಹಲಿ: ಶ್ರೀಲಂಕಾದ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ ಅವರು ನೀತಿ ಸುಧಾರಣೆಗಳು, ಆಡಳಿತ, ಸಾಮರ್ಥ್ಯ ನಿರ್ಮಾಣ, ಡಿಜಿಟಲೀಕರಣ ಮತ್ತು ಸಾರ್ವಜನಿಕ ಸೇವೆ ವಿತರಣೆಯನ್ನು ಸ್ಥಾಪಿಸುವಲ್ಲಿ ಭಾರತದ ಸಹಾಯವನ್ನು ಕೋರಿದ್ದಾರೆ ಎಂದು ಭಾರತದ ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯವು ಅಧಿಕೃತ ಹೇಳಿಕೆಯನ್ನು ನೀಡಿದೆ.
ರಾಷ್ಟ್ರೀಯ ಉತ್ತಮ ಆಡಳಿತ ಕೇಂದ್ರದ (ಎನ್ಸಿಜಿಜಿ) ಮಹಾನಿರ್ದೇಶಕ ಭರತ್ ಲಾಲ್ ನೇತೃತ್ವದ ಭಾರತೀಯ ನಿಯೋಗ ಶನಿವಾರ ದ್ವೀಪ ದೇಶದಲ್ಲಿ ಶ್ರೀಲಂಕಾ ಅಧ್ಯಕ್ಷರನ್ನು ಭೇಟಿ ಮಾಡಿ ನೀತಿ ಸುಧಾರಣೆಗಳು, ಉತ್ತಮ ಆಡಳಿತ, ಡಿಜಿಟಲೀಕರಣ, ಸಾಮರ್ಥ್ಯ ವೃದ್ಧಿ ಮತ್ತು ತರಬೇತಿ, ಸಾರ್ವಜನಿಕ ಸೇವೆ ವಿತರಣೆ, ಸಂಸ್ಥೆ ನಿರ್ಮಾಣದಂತಹ ವಿಷಯಗಳ ಕುರಿತು ಚರ್ಚಿಸಿತು.
ಮೂಲಗಳ ಪ್ರಕಾರ, ಭಾರತವು ಸಾಮಾಜಿಕ ಆರ್ಥಿಕ ಅಭಿವೃದ್ಧಿಯನ್ನು ನಿರ್ವಹಿಸಿದ ರೀತಿ ಮತ್ತು ಹೆಚ್ಚಿನ ಆರ್ಥಿಕ ಬೆಳವಣಿಗೆಯನ್ನು ಖಾತ್ರಿಪಡಿಸಿದ ರೀತಿಯನ್ನು ರನಿಲ್ ವಿಕ್ರಮಸಿಂಘೆ ಮೆಚ್ಚಿದರು . ಸಭೆಯಲ್ಲಿ, ಅವರು ಶ್ರೀಲಂಕಾದ ಬಗ್ಗೆ ತಮ್ಮ ದೃಷ್ಟಿಕೋನವನ್ನು ಹಂಚಿಕೊಂಡರು. ಅಲ್ಲದೇ ಶ್ರೀಲಂಕಾದಲ್ಲಿ ಆಡಳಿತ ಮತ್ತು ಸಾರ್ವಜನಿಕ ನೀತಿ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು NCGGಗೆ ಸಹಾಯ ಮಾಡುವಂತೆ ಅವರು ಒತ್ತಾಯಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.