ನವದೆಹಲಿ: ಬಿಜೆಪಿ ಏಪ್ರಿಲ್ 6ರಂದು 43 ನೇ ಸಂಸ್ಥಾಪನಾ ದಿನವನ್ನು ಆಚರಿಸುತ್ತದೆ. ಈ ಸಂದರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾಡುವ ಭಾಷಣವನ್ನು 10 ಲಕ್ಷ ಸ್ಥಳಗಳಲ್ಲಿ ದೇಶದಾದ್ಯಂತ ಪ್ರಸಾರ ಮಾಡಲು ಬಿಜೆಪಿ ಯೋಜಿಸಿದೆ.
ಬಿಜೆಪಿ ಸಂಸ್ಥಾಪನಾ ದಿನಾಚರಣೆಗೆ ಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ದೇಶದ 10 ಲಕ್ಷ ಸ್ಥಳಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿಶೇಷ ಭಾಷಣವನ್ನು ಪ್ರಸಾರ ಮಾಡಲಾಗುವುದು ಎಂದು ಬಿಜೆಪಿಯ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ. ಸದ್ಯ ಅಂತಿಮ ಹಂತದ ಸಿದ್ಧತೆ ನಡೆಯುತ್ತಿದೆ.
ಬಿಜೆಪಿಯ ಮೂಲಗಳ ಪ್ರಕಾರ, ಪ್ರಧಾನಿ ಭಾಷಣವನ್ನು ದೇಶಾದ್ಯಂತ ಪ್ರಸಾರ ಮಾಡಲು ವ್ಯವಸ್ಥೆ ಮಾಡಲಾಗಿದೆ.
ದೆಹಲಿಯಲ್ಲಿರುವ ಬಿಜೆಪಿಯ ರಾಷ್ಟ್ರೀಯ ಕೇಂದ್ರ ಕಚೇರಿಯು ಬೆಳಿಗ್ಗೆ ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಅವರಿಂದ ಧ್ವಜಾರೋಹಣಕ್ಕೆ ಸಾಕ್ಷಿಯಾಗಲಿದೆ. ಅವರು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ನಂತರ, ದೇಶದಾದ್ಯಂತದ ಕಚೇರಿಗಳು ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣವನ್ನು ಪ್ರಸಾರ ಮಾಡುತ್ತವೆ. ಬಿಜೆಪಿ ನಾಯಕರು, ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಪ್ರಧಾನಿಯವರ ಭಾಷಣವನ್ನು ಕೇಳಲು ರಾಷ್ಟ್ರವ್ಯಾಪಿ ಪಕ್ಷದ ಕಚೇರಿಗಳಲ್ಲಿ ಜಮಾಯಿಸಲಿದ್ದಾರೆ.
“ಬೂತ್ ಮಟ್ಟದ ಎಲ್ಲಾ ಕಾರ್ಯಕರ್ತರಿಗೆ ಮಾಹಿತಿ ನೀಡಲಾಗಿದೆ. ಕಾರ್ಯಕ್ರಮದ ರೂಪುರೇಷೆಗಳ ಬಗ್ಗೆ ಬಿಜೆಪಿ ಕಾರ್ಯಕರ್ತರಿಗೆ ಪತ್ರವನ್ನೂ ನೀಡಲಾಗಿದೆ” ಎಂದು ಬಿಜೆಪಿ ಮುಖಂಡರೊಬ್ಬರು ತಿಳಿಸಿದ್ದಾರೆ.
ಏಪ್ರಿಲ್ 6 ರಿಂದ ಏಪ್ರಿಲ್ 14 ರಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದವರೆಗೆ ಒಂದು ವಾರದ ಸಾಮಾಜಿಕ ಸಾಮರಸ್ಯ ಅಭಿಯಾನವನ್ನು ಪಕ್ಷವು ಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ, ಏಪ್ರಿಲ್ 6 ರಿಂದ ಪ್ರಾರಂಭವಾಗುವ ಮತ್ತು ಏಪ್ರಿಲ್ 14 ರಂದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜನ್ಮದಿನದಂದು ಮುಕ್ತಾಯಗೊಳ್ಳುವ ಸಾಮಾಜಿಕ ಸಾಮರಸ್ಯವನ್ನು ಪ್ರಚುರಪಡಿಸಲು ಪಕ್ಷವು ಒಂದು ವಾರದ ಅಭಿಯಾನವನ್ನು ರೂಪಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.