ನ್ಯೂಯಾರ್ಕ್: ಅರುಣಾಚಲ ಪ್ರದೇಶದ ಪ್ರದೇಶಗಳನ್ನು ಮರುನಾಮಕರಣ ಮಾಡುವ ಮೂಲಕ ಆ ಪ್ರದೇಶದ ಮೇಲೆ ಹಕ್ಕು ಸಾಧಿಸಲು ಚೀನಾ ಮಾಡುತ್ತಿರುವ ಪ್ರಯತ್ನಗಳನ್ನು ಅಮೆರಿಕಾ ಬಲವಾಗಿ ವಿರೋಧಿಸಿದೆ.
ಪ್ರಶ್ನೆಯೊಂದಕ್ಕೆ ಉತ್ತರ ನೀಡಿದ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್-ಪಿಯರ್, ಅರುಣಾಚಲ ಪ್ರದೇಶವನ್ನು ಭಾರತದ ಅವಿಭಾಜ್ಯ ಅಂಗವೆಂದು ಯುಎಸ್ ಗುರುತಿಸುತ್ತದೆ ಎಂದಿದ್ದಾರೆ.
ಚೀನಾದ ನಾಗರಿಕ ವ್ಯವಹಾರಗಳ ಸಚಿವಾಲಯವು ಅರುಣಾಚಲ ಪ್ರದೇಶದ 11 ಸ್ಥಳಗಳನ್ನು ಮರುನಾಮಕರಣ ಮಾಡಿದ ನಂತರ ಈ ಹೇಳಿಕೆ ನೀಡಿರುವುದು ಮಹತ್ವ ಪಡೆದುಕೊಂಡಿದೆ.
ಇದಕ್ಕೂ ಮೊದಲು, ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಅಧಿಕೃತ ವಕ್ತಾರ ಅರಿಂದಮ್ ಬಾಗ್ಚಿ ಚೀನಾ ನಡೆಯನ್ನು ಖಂಡಿಸಿದ್ದು, ಚೀನಾ ಇಂತಹ ಪ್ರಯತ್ನ ಮಾಡುತ್ತಿರುವುದು ಇದೇ ಮೊದಲಲ್ಲ. ಭಾರತ ಇದನ್ನು ಸಾರಾಸಗಟಾಗಿ ತಿರಸ್ಕರಿಸುತ್ತದೆ ಎಂದಿದ್ದಾರೆ.
ಅರುಣಾಚಲ ಪ್ರದೇಶವು ದೇಶದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗವಾಗಿದೆ ಮತ್ತು ಆವಿಷ್ಕರಿಸಿದ ಹೆಸರುಗಳನ್ನು ಇಡುವ ಪ್ರಯತ್ನಗಳು ಈ ವಾಸ್ತವತೆಯನ್ನು ಬದಲಾಯಿಸುವುದಿಲ್ಲ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.