ನವದೆಹಲಿ: ಸಕಾರಾತ್ಮಕ ಬೆಳವಣಿಗೆಯೊಂದರಲ್ಲಿ, ಕಳೆದ ಮೂರು ವರ್ಷಗಳಲ್ಲಿ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ ಹೊರ ರಾಜ್ಯದ 185 ಜನರು ಭೂಮಿ ಖರೀದಿಸಿದ್ದಾರೆ.
“ಜಮ್ಮು ಮತ್ತು ಕಾಶ್ಮೀರ ಸರ್ಕಾರವು ಒದಗಿಸಿದ ಮಾಹಿತಿಯ ಪ್ರಕಾರ, 2020, 2021 ಮತ್ತು 2022 ರಲ್ಲಿ ಜಮ್ಮು-ಕಾಶ್ಮೀರದಲ್ಲಿ ಹೊರಗಿನ ಒಟ್ಟು 185 ವ್ಯಕ್ತಿಗಳು ಭೂಮಿಯನ್ನು ಖರೀದಿಸಿದ್ದಾರೆ. ಒಬ್ಬ ವ್ಯಕ್ತಿ 2020 ರಲ್ಲಿ ಭೂಮಿಯನ್ನು ಖರೀದಿಸಿದ್ದಾರೆ, 2021 ರಲ್ಲಿ 57 ಮತ್ತು 2022 ರಲ್ಲಿ 127 ಮಂದಿ ಭೂಮಿ ಖರೀದಿದ್ದಾರೆ”ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ನಿತ್ಯಾನಂದ್ ರಾಯ್ ಅವರು ಲಿಖಿತ ಪ್ರಶ್ನೆಗೆ ಉತ್ತರವಾಗಿ ರಾಜ್ಯಸಭೆಗೆ ತಿಳಿಸಿದ್ದಾರೆ.
ಬಹುರಾಷ್ಟ್ರೀಯ ಕಂಪನಿಗಳು ಸೇರಿದಂತೆ ಒಟ್ಟು 1,559 ಭಾರತೀಯ ಕಂಪನಿಗಳು ಜಮ್ಮು-ಕಾಶ್ಮೀರದಲ್ಲಿ ಹೂಡಿಕೆ ಮಾಡಿದೆ. 2020 ರಲ್ಲಿ 310, 2021 ರಲ್ಲಿ 175 ಮತ್ತು 2022-23 ರಲ್ಲಿ 1,074 ಸಂಸ್ಥೆಗಳು ಹೂಡಿಕೆ ಮಾಡಿವೆ ಎಂದಿದ್ದಾರೆ.
ಕೇಂದ್ರಾಡಳಿತ ಪ್ರದೇಶವಾದ ಲಡಾಖ್ ಒದಗಿಸಿದ ಮಾಹಿತಿಯ ಪ್ರಕಾರ, ಅಲ್ಲಿ ಹೊರಗಿನ ವ್ಯಕ್ತಿಗಳು ಯಾವುದೇ ಭೂಮಿಯನ್ನು ಖರೀದಿಸಿಲ್ಲ ಮತ್ತು ಕಳೆದ ಮೂರು ವರ್ಷಗಳಲ್ಲಿ ಬಹುರಾಷ್ಟ್ರೀಯ ಕಂಪನಿಗಳು ಸೇರಿದಂತೆ ಯಾವುದೇ ಭಾರತೀಯ ಕಂಪನಿಗಳು ಹೂಡಿಕೆ ಮಾಡಿಲ್ಲ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.