ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಶುಕ್ರವಾರ ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತವು 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಪಡಿತರವನ್ನು ನೀಡುತ್ತಿದ್ದರೆ, ನೆರೆಯ ದೇಶದ ಜನರು ದಿನಕ್ಕೆ ಎರಡು ಊಟಕ್ಕೂ ಪರದಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಕೌಶಂಬಿಯಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರಗಳು ಹೇಗೆ ಕಾರ್ಯನಿರ್ವಹಿಸಬೇಕು ಎಂಬುದನ್ನು ತಿಳಿಯಲು ಜಗತ್ತು ಇಂದು ಭಾರತದತ್ತ ನೋಡುತ್ತಿದೆ ಎಂದಿದ್ದಾರೆ.
“ಎಲ್ಲ ಭಾರತೀಯರು ಯಾವುದೇ ತಾರತಮ್ಯವಿಲ್ಲದೆ ಅಭಿವೃದ್ಧಿ ಯೋಜನೆಗಳ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ. ರಾಷ್ಟ್ರವು ಸಮೃದ್ಧಿಯ ಹೊಸ ಎತ್ತರವನ್ನು ಏರುತ್ತಿದೆ. ರಾಷ್ಟ್ರದಲ್ಲಿ ಅತ್ಯುತ್ತಮ ಭದ್ರತಾ ವಾತಾವರಣ ನಿರ್ಮಿಸಲು ಪ್ರಯತ್ನಿಸಲಾಗುತ್ತಿದೆ,” ಎಂದು ಮುಖ್ಯಮಂತ್ರಿ ಹೇಳಿದರು.
ಆದಿತ್ಯನಾಥ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಕೌಶಂಬಿ ಮಹೋತ್ಸವ 2023 ರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಇಲ್ಲಿಗೆ ಆಗಮಿಸಿ, ಹಲವಾರು ಅಭಿವೃದ್ಧಿ ಯೋಜನೆಗಳನ್ನು ಪ್ರಾರಂಭಿಸಿದರು ಮತ್ತು ‘ಸಂಸದ್ ಖೇಲ್ ಸ್ಪರ್ಧೆʼಯ ಅನೇಕ ಆಟಗಾರರನ್ನು ಈ ಸಂದರ್ಭದಲ್ಲಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಶಾ ಅವರು 612 ಕೋಟಿ ರೂ.ಗೂ ಹೆಚ್ಚು ಮೊತ್ತದ ಒಟ್ಟು 117 ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು ಎಂದು ಪ್ರಕಟಣೆ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.