ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಂತರರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್) – ವಿಶ್ವಬ್ಯಾಂಕ್ನ ವಾರ್ಷಿಕ ಸಭೆಗಳಲ್ಲಿ ಭಾಗವಹಿಸಲು ಯುಎಸ್ಎಗೆ ಭೇಟಿ ನೀಡಿದ್ದಾರೆ. ಸಭೆಯಲ್ಲಿ ವಿಶ್ವದಾದ್ಯಂತದ ಹಣಕಾಸು ಮಂತ್ರಿಗಳು ಮತ್ತು ಕೇಂದ್ರ ಬ್ಯಾಂಕರ್ಗಳು ಇದರಲ್ಲಿ ಭಾಗವಹಿಸಲಿದ್ದಾರೆ.
ವಾಷಿಂಗ್ಟನ್ ಡಿಸಿಯಲ್ಲಿರುವ ಐಎಂಎಫ್ ಪ್ರಧಾನ ಕಚೇರಿಯಲ್ಲಿ ಸೋಮವಾರದಿಂದ ಸಭೆ ನಡೆಯಲಿದೆ. ವಸಂತ ಕಾಲದ ವಾರ್ಷಿಕ ಸಭೆಗಳ ನೇಪಥ್ಯದಲ್ಲಿ ಸೀತಾರಾಮನ್ ಅವರು G20 ದೇಶಗಳ ಆಯಾ ಸಹವರ್ತಿಗಳೊಂದಿಗೆ ಮತ್ತು ಇತರ ನಿಯೋಗಗಳ ಮುಖ್ಯಸ್ಥರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.
ಮಾತ್ರವಲ್ಲದೇ ಸೀತಾರಾಮನ್ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ ದಾಸ್ ಅವರು ಈ ತಿಂಗಳ 12 ರಂದು 2 ನೇ ಜಿ 20 ಹಣಕಾಸು ಮಂತ್ರಿಗಳು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್ಗಳು, ಎಫ್ಎಂಸಿಬಿಜಿ ಸಭೆಯ ಜಂಟಿ ಅಧ್ಯಕ್ಷತೆ ವಹಿಸಲಿದ್ದಾರೆ. G20 ಸದಸ್ಯರು, 13 ಆಹ್ವಾನಿತ ದೇಶಗಳು ಮತ್ತು ವಿವಿಧ ಅಂತರರಾಷ್ಟ್ರೀಯ ಮತ್ತು ಪ್ರಾದೇಶಿಕ ಸಂಸ್ಥೆಗಳಿಂದ ಸುಮಾರು 350 ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಭಾರತದ ಜಿ20 ಫೈನಾನ್ಸ್ ಟ್ರ್ಯಾಕ್ ಅಜೆಂಡಾದಡಿಯಲ್ಲಿ ರೂಪಿಸಲಾದ ಫಲಿತಾಂಶಗಳ ಪ್ರಗತಿಯನ್ನು ಸಭೆಯು ಪರಿಶೀಲಿಸುತ್ತದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.