ಗುಂಡ್ಲುಪೇಟೆ: ಬಂಡಿಪುರ ಸಫಾರಿ ಮುಗಿಸಿಕೊಂಡ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ನೆರೆಯ ತಮಿಳುನಾಡಿನ ಮಧುಮಲೆ ಹುಲಿ ಸಂರಕ್ಷಿತ ಪ್ರದೇಶದ ತೆಪ್ಪ ಕಾಡು ಆನೆ ಶಿಬಿರಕ್ಕೆ ಭೇಟಿ ನೀಡಿದರು.
ಅಲ್ಲಿ ಅವರು ಆಸ್ಕರ್ ಪ್ರಶಸ್ತಿ ವಿಜೇತ ʼದಿ ಎಲಿಫೆಂಟ್ ವಿಸ್ಪರರ್ಸ್ʼ ಸಾಕ್ಷ್ಯಚಿತ್ರದಲ್ಲಿ ಕಾಣಿಸಿಕೊಂಡ ಕಾವಾಡಿ ದಂಪತಿ ಬೊಮ್ಮ ಮತ್ತು ಬೆಳ್ಳಿ ಅವರನ್ನು ಭೇಟಿಯಾದರು. ಅವರ ಆನೆ ಸಾಕು ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲದೆ ದೆಹಲಿಗೆ ಬರುವಂತೆ ಹೇಳಿದರೂ ಯಾಕೆ ಬರಲಿಲ್ಲ ಎಂದು ಪ್ರಶ್ನಿಸಿದರು. ಸಾಕ್ಷ ಚಿತ್ರದಲ್ಲಿ ಕಾಣಿಸಿಕೊಂಡ ರಘು ಮತ್ತು ಅಮ್ಮು ಹೆಸರಿನ ಆನೆ ಮರಿಗಳಿಗೆ ಕಬ್ಬು ನೀಡಿ ಸಂತಸ ಪಟ್ಟರು.
ಶಿಬಿರದಲ್ಲಿ ಮೋದಿ ಇತರ ಆನೆಗಳನ್ನು ವೀಕ್ಷಿಸಿದರು, ರಾಣಿ ಎಂಬ ಹೆಸರಿನ ಆನೆಗೆ ಕಬ್ಬು ನೀಡಿ ಅದರ ಸೊಂಡಿಲು ಸವರಿದರು. ಬಳಿಕ ಆನೆ ಪಾಲಕರಾದ ಕಿರುಮಾರನ್, ಕುಳ್ಳನ್ ಮತ್ತು ದೇವನ್ ಅವರ ಜೊತೆಗೆ ಮಾತುಕತೆ ನಡೆಸಿದರು. ಆನೆಗಳ ಪಾಲನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಹಿಂದೆ ತಪ್ಪಕಾಡು ಭಾಗದಲ್ಲಿ ಹುಲಿಯನ್ನು ಸೆರೆಹಿಡಿದ ಸಿಬ್ಬಂದಿ ಜೊತೆ ಮಾತುಕತೆ ನಡೆಸಿದರು ಅವರ ಕಾರ್ಯಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು.
What a delight to meet the wonderful Bomman and Belli, along with Bommi and Raghu. pic.twitter.com/Jt75AslRfF
— Narendra Modi (@narendramodi) April 9, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.