ಜೈಪುರ: ರಾಜಸ್ಥಾನದ ಆಡಳಿತರೂಢ ಕಾಂಗ್ರೆಸ್ ಪಕ್ಷದಲ್ಲಿನ ಭಿನ್ನಮತ ಈಗ ಬೀದಿಗೆ ಬಿದ್ದಿದೆ. ಭ್ರಷ್ಟಾಚಾರದ ವಿರುದ್ಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ತಮ್ಮ ಪಕ್ಷದ ವಿರುದ್ಧವೇ ಯುವ ನಾಯಕ ಸಚಿನ್ ಪೈಲಟ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಇದು ಕಾಂಗ್ರೆಸ್ ಅನ್ನು ಮುಖಭಂಗಕ್ಕೀಡಾಗುವಂತೆ ಮಾಡಿದೆ.
ಸಚಿನ್ ಪೈಲೆಟ್ ಅವರಿಗೆ ಕಾಂಗ್ರೆಸ್ ಕಠಿಣ ಎಚ್ಚರಿಕೆ ನೀಡಿದ್ದು, ಅವರು ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿದ್ದಾರೆ ಎಂದು ಆರೋಪಿದೆ. ಮಂಗಳವಾರ ಸಚಿನ್ ಪೈಲಟ್ ಅವರ ಅಹೋರಾತ್ರಿ ಉಪವಾಸ ಪಕ್ಷದ ಹಿತಾಸಕ್ತಿಗೆ ವಿರುದ್ಧವಾಗಿದೆ ಮತ್ತು ಪಕ್ಷ ವಿರೋಧಿ ಚಟುವಟಿಕೆಯಾಗಿದೆ. ಅವರದೇ ಸರ್ಕಾರದಲ್ಲಿ ಯಾವುದೇ ಸಮಸ್ಯೆಯಿದ್ದರೆ ಅದನ್ನು ಮಾಧ್ಯಮಗಳು ಮತ್ತು ಸಾರ್ವಜನಿಕರ ಬದಲಿಗೆ ಪಕ್ಷದ ವೇದಿಕೆಗಳಲ್ಲಿ ಚರ್ಚಿಸಬಹುದು ಎಂದು ಕಾಂಗ್ರೆಸ್ ಹೇಳಿದೆ.
ದೀರ್ಘ ಕಾಲದಿಂದ ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟಿರುವ ಪೈಲಟ್ ಮತ್ತು ಗೆಹ್ಲೋಟ್ ನಡುವಿನ ಘರ್ಷಣೆಯನ್ನು ಶಮನಗೊಳಿಸುವ ಅಂತಿಮ ಪ್ರಯತ್ನವನ್ನು ಕೂಡ ಕಾಂಗ್ರೆಸ್ ಮಾಡುತ್ತಿದೆ.
ಇನ್ನೊಂದೆಡೆ ಗೆಹ್ಲೋಟ್ ಸರ್ಕಾರವು ಪೈಲಟ್ ಅವರ ನಿಷ್ಕ್ರಿಯತೆಯ ಆರೋಪಗಳನ್ನು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಒಳಜಗಳಗಳು ತಾರಕಕ್ಕೇರಿದ್ದು ಕಾಂಗ್ರೆಸ್ ಪಕ್ಷಕ್ಕೆ ನುಂಗಲಾರದ ಬಿಸಿ ತುಪ್ಪವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.