ನವದೆಹಲಿ: ದೇಶದ ಶ್ರೀಮಂತ ಮುಖ್ಯಮಂತ್ರಿ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ ಮತ್ತು ಅತಿ ಬಡ ಮುಖ್ಯಮಂತ್ರಿ ಪಶ್ಚಿಮಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಎಂದು ವರದಿ ತಿಳಿಸಿದೆ.
ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್(ಎಡಿಆರ್) ವರದಿಯ ಪ್ರಕಾರ, 500 ಕೋಟಿ ರೂಪಾಯಿಗೂ ಅಧಿಕ ಆಸ್ತಿ ಹೊಂದಿರುವ ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರು ದೇಶದ ಅತ್ಯಂತ ಶ್ರೀಮಂತ ಸಿಎಂ ಆಗಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ದೇಶದ ಅತ್ಯಂತ ಬಡ ಸಿಎಂ ಆಗಿದ್ದಾರೆ.
ದೇಶದ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಅಫಿಡವಿಟ್ಗಳನ್ನು ವಿಶ್ಲೇಷಿಸಿದ ನಂತರ ಎಡಿಆರ್ ಈ ವರದಿ ಬಿಡುಗಡೆ ಮಾಡಿದ್ದು, ದೇಶದ 30 ಮುಖ್ಯಮಂತ್ರಿಗಳ ಪೈಕಿ 29 ಮುಖ್ಯಮಂತ್ರಿಗಳು ಕೋಟ್ಯಾಧಿಪತಿಗಳಾಗಿದ್ದಾರೆ. ಪ್ರತಿ ಸಿಎಂ ಸರಾಸರಿ ಆಸ್ತಿ 33.96 ಕೋಟಿ ರೂ. ಇದೆ ಎಂದು ವರದಿ ಹೇಳಿದೆ
30 ಮುಖ್ಯಮಂತ್ರಿಗಳು, ಅವರ ಸ್ವಯಂ ಪ್ರಮಾಣ ಪತ್ರದ ಅಫಿಡವಿಟ್ಗಳ ಆಧಾರದ ಮೇಲೆ ಈ ವರದಿ ಸಿದ್ಧಗೊಂಡಿದೆ.
ಅರುಣಾಚಲ ಪ್ರದೇಶದ ಸಿಎಂ ಪೇಮಾ ಖಂಡು 163 ಕೋಟಿ ಆಸ್ತಿಯೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಒಡಿಶಾ ಸಿಎಂ ನವೀನ್ ಪಟ್ನಾಯಕ್ 63 ಕೋಟಿ ರೂಪಾಯಿಗೂ ಹೆಚ್ಚು ಆಸ್ತಿಯೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ. ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು 1 ಕೋಟಿ ರೂಪಾಯಿ ಆಸ್ತಿಯೊಂದಿಗೆ ನಂತರದ ಸ್ಥಾನದಲ್ಲಿದ್ದಾರೆ. 15 ಲಕ್ಷ ರೂಪಾಯಿ ಆಸ್ತಿ ಹೊಂದಿರುವ ಮಮತಾ ಬ್ಯಾನರ್ಜಿ ಅವರು ದೇಶದ ಅತ್ಯಂತ ಬಡ ಮುಖ್ಯಮಂತ್ರಿ ಎಂದು ಎಡಿಆರ್ ವರದಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.