ಲಕ್ನೋ: ವಕೀಲ ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಗ್ಯಾಂಗ್ಸ್ಟರ್ ಕಂ ರಾಜಕಾರಣಿ ಅತಿಕ್ ಅಹ್ಮದ್ನ ಪುತ್ರ ಅಸದ್ನನ್ನು ಉತ್ತರ ಪ್ರದೇಶ ಪೊಲೀಸ್ ವಿಶೇಷ ಕಾರ್ಯಪಡೆ (ಎಸ್ ಟಿಎಫ್) ಝಾನ್ಸಿಯಲ್ಲಿ ಎನ್ ಕೌಂಟರ್ ಮಾಡಿ ಹತ್ಯೆ ಮಾಡಿದೆ.
ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಅಸದ್ ಮತ್ತು ಮತ್ತೋರ್ವ ಆರೋಪಿ ಗುಲಾಂ ಕೂಡ ಬೇಕಾಗಿದ್ದು, ಇವರ ತಲೆ ಮೇಲೆ ತಲಾ 5 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು. ಹತ್ಯೆಗೀಡಾದ ಆರೋಪಿಗಳಿಂದ ಅತ್ಯಾಧುನಿಕ ವಿದೇಶಿ ನಿರ್ಮಿತ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅತೀಕ್ ಅಹ್ಮದ್ ಮತ್ತು ಆತನ ಸಹೋದರನನ್ನು ಪ್ರಯಾಗ್ರಾಜ್ ನ್ಯಾಯಾಲಯಕ್ಕೆ ಹಾಜರುಪಡಿಸಿದ ದಿನದಂದೇ ಅಸದ್ನನ್ನು ಎನ್ಕೌಂಟರ್ನಲ್ಲಿ ಕೊಲ್ಲಲಾಗಿದೆ.
ಅತೀಕ್ ಅಹ್ಮದ್ ಅನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಅಹಮದಾಬಾದ್ನ ಸಾಬರಮತಿ ಜೈಲಿನಿಂದ ರಸ್ತೆ ಮೂಲಕ ಪ್ರಯಾಗ್ರಾಜ್ಗೆ ಕರೆತರಲಾಯಿತು. ಆತನ ಸಹೋದರ ಖಾಲಿದ್ ಅಜೀಂ ಅಲಿಯಾಸ್ ಅಶ್ರಫ್ ಅನ್ನು ಬರೇಲಿ ಜೈಲಿನಿಂದ ಕರೆತರಲಾಗಿತ್ತು. ಉಮೇಶ್ ಪಾಲ್ ಬಹುಜನ ಸಮಾಜ ಪಕ್ಷದ ಶಾಸಕ ರಾಜು ಪಾಲ್ ಅವರ ಹತ್ಯೆಗೆ ಸಾಕ್ಷಿಯಾಗಿದ್ದರು, ಅದರಲ್ಲಿ ಅತೀಕ್ ಅಹ್ಮದ್ ಆರೋಪಿಯಾಗಿದ್ದ.
ನಂತರ ಉಮೇಶ್ ಪಾಲ್ ಮತ್ತು ಅವರ ಇಬ್ಬರು ಭದ್ರತಾ ಸಿಬ್ಬಂದಿಯನ್ನು ಪ್ರಯಾಗ್ರಾಜ್ನಲ್ಲಿರುವ ಅವರ ಮನೆಯ ಹೊರಗೆ ಗುಂಡಿಕ್ಕಿ ಕೊಲ್ಲಲಾಯಿತು. ಉಮೇಶ್ ಪಾಲ್ ಅವರ ಪತ್ನಿ ಜಯಪಾಲ್ ನೀಡಿದ ದೂರಿನ ಆಧಾರದ ಮೇಲೆ ಅಹ್ಮದ್, ಅಶ್ರಫ್, ಅವರ ಕುಟುಂಬ ಸದಸ್ಯರು ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.