ನvದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ರಾಷ್ಟ್ರ ರಾಜಧಾನಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದರು. ಗೃಹ ಸಚಿವಾಲಯದ ನಾರ್ತ್ ಬ್ಲಾಕ್ ಕಚೇರಿಯಲ್ಲಿ ಮಧ್ಯಾಹ್ನ 3 ಗಂಟೆಗೆ ಸಭೆ ಆರಂಭವಾಯಿತು.
ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಮಹಾನಿರ್ದೇಶಕ ದಿಲ್ಬಾಗ್ ಸಿಂಗ್ ಮತ್ತು ಗೃಹ ಸಚಿವಾಲಯ ಮತ್ತು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಹಲವು ವರ್ಷಗಳಿಂದ ಹಲವಾರು ನಾಗರಿಕರು ಮತ್ತು ಭದ್ರತಾ ಪಡೆ ಸಿಬ್ಬಂದಿಯನ್ನು ಉಗ್ರಗಾಮಿಗಳು ಗುರಿಯಾಗಿಸುತ್ತಿದ್ದಾರೆ ಮತ್ತು ಅಂತಹ ದಾಳಿಗಳಲ್ಲಿ ಹಲವಾರು ಸಿಬ್ಬಂದಿಗಳು ಪ್ರಾಣ ಕಳೆದುಕೊಂಡಿದ್ದಾರೆ. ಇತ್ತೀಚಿನ ದಿನಗಳಲ್ಲೂ ಅಹಿತರಕರ ಘಟನೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನ ಸಭೆ ಕರೆಯಲಾಗಿದೆ. ಜೆ-ಕೆ ಸ್ಥಿತಿಯನ್ನು ಪರಿಶೀಲಿಸಲು ಇದೇ ರೀತಿಯ ಸಭೆಗಳನ್ನು ಕಾಲಕಾಲಕ್ಕೆ ಗೃಹ ಸಚಿವರ ನೇತೃತ್ವದಲ್ಲಿ ನಡೆಸುತ್ತಾ ಬರಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.