ನವದೆಹಲಿ: ಭಾರತ ಸಂವಿಧಾನ ಶಿಲ್ಪಿ ಡಾ ಭೀಮ್ ರಾವ್ ಅಂಬೇಡ್ಕರ್ ಅವರ ಜನ್ಮದಿನದಂದು ಇಂದು ರಾಷ್ಟ್ರವು ಅವರನ್ನು ಸ್ಮರಿಸುತ್ತಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ದೇಶದ ನಾಗರಿಕರಿಗೆ ಶುಭಹಾರೈಸಿದ್ದಾರೆ.
ಶಿಕ್ಷಣ ನೀಡಿ, ಸಂಘಟಿತರಾಗಿ, ವಂಚಿತ ಸಮುದಾಯಗಳನ್ನು ಸಮಾಜದ ಮುಖ್ಯವಾಹಿನಿಗೆ ತರಲು ಹೋರಾಟ ನಡೆಸುವ ಬಿ.ಆರ್.ಅಂಬೇಡ್ಕರ್ ಅವರ ಮೂಲ ಧ್ಯೇಯ ಸದಾ ಪ್ರಸ್ತುತವಾಗಿರುತ್ತದೆ ಎಂದು ರಾಷ್ಟ್ರಪತಿಗಳು ಸಂದೇಶದಲ್ಲಿ ತಿಳಿಸಿದ್ದಾರೆ.
ಅಂಬೇಡ್ಕರ್ ಅವರಿಗೆ ಕಾನೂನಿನ ಆಳ್ವಿಕೆಯ ಮೇಲೆ ನಂಬಿಕೆ ಇತ್ತು ಮತ್ತು ದೇಶದ ಪ್ರಜಾಪ್ರಭುತ್ವದ ಬೆನ್ನೆಲುಬಾಗಿ ಸಾಮಾಜಿಕ ಮತ್ತು ಆರ್ಥಿಕ ಸಮಾನತೆಗೆ ಬದ್ಧತೆಯನ್ನು ಎತ್ತಿ ತೋರಿಸಿದರು. ಡಾ. ಅಂಬೇಡ್ಕರ್ ಅವರ ಆದರ್ಶಗಳನ್ನು ಅಳವಡಿಸಿಕೊಳ್ಳಲು ನಾಗರಿಕರು ಪ್ರತಿಜ್ಞೆ ಮಾಡಬೇಕು ಮತ್ತು ಸಮಾನತೆ ಮತ್ತು ಸಮೃದ್ಧ ರಾಷ್ಟ್ರ ಮತ್ತು ಸಮಾಜವನ್ನು ರಚಿಸಲು ಕೆಲಸ ಮಾಡುವುದನ್ನು ಮುಂದುವರಿಸಬೇಕೆಂದು ಮುರ್ಮು ಒತ್ತಾಯಿಸಿದರು.
ಅಂಬೇಡ್ಕರ್ ಜಯಂತಿಯ ಹಿನ್ನೆಲೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಯಾತ್ರೆ ಭಾರತ್ ಗೌರವ್ ಟೂರಿಸ್ಟ್ ರೈಲಿಗೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ಕೇಂದ್ರ ಸಚಿವರಾದ ಡಾ. ವೀರೇಂದ್ರ ಕುಮಾರ್ ಮತ್ತು ಜಿ.ಕಿಶನ್ ರೆಡ್ಡಿ ಅವರು ನವದೆಹಲಿಯಿಂದ ಚಾಲನೆ ನೀಡಲಿದ್ದಾರೆ. ದೇಖೋ ಅಪ್ನಾ ದೇಶ್ ಉಪಕ್ರಮದ ಅಡಿಯಲ್ಲಿ, ಈ ರೈಲು ಡಾ ಭೀಮ್ ರಾವ್ ಅಂಬೇಡ್ಕರ್ ಅವರ ಜೀವನಕ್ಕೆ ಸಂಬಂಧಿಸಿದ ಪ್ರಮುಖ ಸ್ಥಳಗಳಿಗೆ ತೆರಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.