ರಾಜ್ಯ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮೋತ್ಸವ
ಸಂವಿಧಾನ ಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 132ನೇ ಜಯಂತಿಯನ್ನು ಬೆಂಗಳೂರಿನ ರಾಜ್ಯ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಇಂದು ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಪೌರ ಕಾರ್ಮಿಕರಾದ ಮುನಿಯಮ್ಮ, ಈಶ್ವರ್, ಅರುಣ್, ಭೂಮಿ, ಕಮಲ ಅವರು ಸನ್ಮಾನ ಸ್ವೀಕರಿಸಿದರು ಮತ್ತು ಕೃತಜ್ಞತೆ ಸಲ್ಲಿಸಿದರು.
ಡಾ. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಮತ್ತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ರಾಜ್ಯ ಬಿಜೆಪಿ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಪುಲಿಕೇಶಿ ನಗರ ಬಿಜೆಪಿ ನಿಯೋಜಿತ ಅಭ್ಯರ್ಥಿ ಎ.ಮುರಳಿ ಅವರು ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದು ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಬಿಜೆಪಿ ರಾಜ್ಯ ಕಚೇರಿಯಲ್ಲಿ ಡಾ|| ಬಿ.ಆರ್.ಅಂಬೇಡ್ಕರ್ ಜಯಂತ್ಯುತ್ಸವ
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತ್ಯುತ್ಸವವನ್ನು ನೆರವೇರಿಸಲಾಯಿತು. ಬಾಬಾ ಸಾಹೇಬರ ಜೀವನ- ಆದರ್ಶಗಳನ್ನು ಅಳವಡಿಸಿಕೊಳ್ಳಲು ಕೋರಲಾಯಿತು.
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಮತ್ತು ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ, ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಡಿ.ವಿ. ಸದಾನಂದಗೌಡ, ಕೇಂದ್ರ ಸಚಿವ ಭಗವಂತ ಖೂಬಾ, ಸಂಸದ ಪಿ.ಸಿ. ಮೋಹನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಎಸ್ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಪಕ್ಷದ ಮುಖಂಡರು, ಕಾರ್ಯಕರ್ತರು, ಕಾರ್ಯಾಲಯದ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.