ನವದೆಹಲಿ: ಯುಎಸ್ ಸೆನೆಟರ್ ಟಾಡ್ ಯಂಗ್ ನೇತೃತ್ವದ ಉನ್ನತ ಮಟ್ಟದ ಯುಎಸ್ ನಿಯೋಗವು ಶುಕ್ರವಾರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ ಜಿತೇಂದ್ರ ಸಿಂಗ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿತು.
ಸಭೆಯಲ್ಲಿ, ಟಾಡ್ ಯಂಗ್ ಅವರು ಕೃತಕ ಬುದ್ಧಿಮತ್ತೆ, ಸೈಬರ್ ಭದ್ರತೆ, ಸೆಮಿಕಂಡಕ್ಟರ್, ಕ್ಲೀನ್ ಎನರ್ಜಿ, ಜೈವಿಕ ತಂತ್ರಜ್ಞಾನ ಮತ್ತು ರಕ್ಷಣೆಯಂತಹ ಕ್ಷೇತ್ರಗಳಲ್ಲಿ ಭಾರತದೊಂದಿಗೆ ಆಳವಾದ ದ್ವಿಪಕ್ಷೀಯ ಸಹಕಾರದ ಬಗ್ಗೆ ಚರ್ಚೆ ನಡೆಸಿದರು ಎಂದು ವರದಿಗಳು ತಿಳಿಸಿವೆ.
ಈ ಸಂದರ್ಭದಲ್ಲಿ ಡಾ.ಜಿತೇಂದ್ರ ಸಿಂಗ್ ಮಾತನಾಡಿ, ಕಳೆದ ಒಂಬತ್ತು ವರ್ಷಗಳಲ್ಲಿ ಸರ್ಕಾರವು ವಿಜ್ಞಾನ ಆಧಾರಿತ ಪರಿಹಾರಗಳ ಮೂಲಕ ಸಾಮಾನ್ಯ ಜನರಿಗೆ ಬದುಕಲು ಸುಲಭವಾಗುವಂತೆ ಸಾಮಾಜಿಕ ಕ್ಷೇತ್ರದ ಯೋಜನೆಗಳನ್ನು ಜಾರಿಗೆ ತರಲು ಪ್ರಯತ್ನಿಸಿದೆ. ಬಯೋ-ಟೆಕ್, ಡೈರಿ ಮತ್ತು ಅಗ್ರಿ-ಟೆಕ್ ವಲಯಗಳಲ್ಲಿ ಉದಯೋನ್ಮುಖ ಮತ್ತು ಭರವಸೆಯ ಸ್ಟಾರ್ಟ್ಅಪ್ಗಳಲ್ಲಿ ಭಾರತ-ಯುಎಸ್ ಸಹಯೋಗವನ್ನು ತಮ್ಮ ಸಚಿವಾಲಯ ಬೆಂಬಲಿಸುತ್ತದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.