ನವದೆಹಲಿ: ಕಾನ್ಸ್ಟೆಬಲ್ (ಜಿಡಿ) ಸಿಎಪಿಎಫ್ ಪರೀಕ್ಷೆಗಳನ್ನು 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸುವ ಐತಿಹಾಸಿಕ ನಿರ್ಧಾರವನ್ನು ಕೇಂದ್ರ ತೆಗೆದುಕೊಂಡಿದೆ.
ಈ ಬಗ್ಗೆ ಟ್ವಿಟ್ ಮಾಡಿರುವ ಕೇಂದ್ರ ಗೃಹ ಸಚಿವಾಲಯ, “ಐತಿಹಾಸಿಕ ಕ್ರಮದಲ್ಲಿ ಕಾನ್ಸ್ಟೆಬಲ್ (ಜಿಡಿ) ಸಿಎಪಿಎಫ್ ಪರೀಕ್ಷೆಗಳನ್ನು 13 ಪ್ರಾದೇಶಿಕ ಭಾಷೆಗಳಲ್ಲಿ ನಡೆಸಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ. ಇದು CAPF ಗಳಲ್ಲಿ ಸ್ಥಳೀಯ ಯುವಕರ ಭಾಗವಹಿಸುವಿಕೆಗೆ ಪ್ರಚೋದನೆಯನ್ನು ನೀಡುತ್ತದೆ. ನಿರ್ಧಾರವು ಪ್ರಧಾನಿ ನರೇಂದ್ರ ಮೋದಿಯವರ ಪ್ರಾದೇಶಿಕ ಭಾಷೆಗಳನ್ನು ಅಭಿವೃದ್ಧಿಪಡಿಸುವ ಮತ್ತು ಪ್ರೋತ್ಸಾಹಿಸುವ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ” ಎಂದಿದೆ.
ಪ್ರಶ್ನೆ ಪತ್ರಿಕೆಗಳನ್ನು ಹಿಂದೆ ಮತ್ತು ಇಂಗ್ಲೀಷ್ ಮಾತ್ರವಲ್ಲದೇ, ಅಸ್ಸಾಮಿ, ಬೆಂಗಾಳಿ, ಉರ್ದು, ಗುಜರಾತಿ, ಮರಾಠಿ, ಮಲಯಾಳಂ, ಕನ್ನಡ, ತಮಿಳು, ತೆಲುಗು, ಕೊಂಕಣಿ ಮತ್ತು ಮಣಿಪುರಗಳಲ್ಲಿ ಸಿದ್ಧಪಡಿಸಲಾಗುವುದು ಎಂದಿದೆ.
ಪರೀಕ್ಷೆ 2024ರ ಜೂನ್ 1ರಿಂದ ಆರಂಭವಾಗಲಿದೆ.
In a historic decision, MHA decides to conduct the Constable (GD) CAPF exams in 13 regional languages also. It will give an impetus to participation of local youth in CAPFs.
The decision reflects PM @narendramodi Ji's commitment to developing and encouraging regional languages. pic.twitter.com/Dd1iNWzyL5
— गृहमंत्री कार्यालय, HMO India (@HMOIndia) April 15, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.