ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ರಂಗು ಪಡೆದುಕೊಂಡಿದೆ. ರಾಜಕಾರಣಿಗಳು ಸಕ್ರಿಯವಾಗಿ ಪಕ್ಷದ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈಗಾಗಲೇ ಅನೇಕ ಮಂದಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮುಂಬರುವ ವಿಧಾನಸಭಾ ಚುನಾವಣೆಗೆ ಶಿಗ್ಗಾಂವ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು.
ನಂತರ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಸಂಪೂರ್ಣ ಬಹುಮತ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಪಕ್ಷದೊಳಗಿನ ಭಿನ್ನಾಭಿಪ್ರಾಯಗಳು ಇನ್ನೆರಡು ದಿನಗಳಲ್ಲಿ ಬಗೆಹರಿಯಲಿದೆ ಎಂದರು.
ಬಿಜೆಪಿ ಅಭ್ಯರ್ಥಿಗಳ ಪಟ್ಟಿಯಲ್ಲಿ ಸ್ಥಾನ ಸಿಗದ ಜಗದೀಶ ಶೆಟ್ಟರ್ ಅವರಿಗೆ ಬಿಜೆಪಿಯಿಂದ ಹಿರಿಯ ನಾಯಕರು ಸಾಂತ್ವನ ಹೇಳಲಿ, ಶೆಟ್ಟರ್ಗೆ ಟಿಕೆಟ್ ನಿರಾಕರಿಸಿದ್ದಕ್ಕೆ ನಾನೇ ಕಾರಣ ಎಂಬುದು ಸುಳ್ಳು ಆರೋಪ ಎಂದರು.
ನವಕರ್ನಾಟಕದಿಂದ ನವ ಭಾರತ ನಿರ್ಮಾಣ ಮಾಡುವ ಧ್ಯೇಯದೊಂದಿಗೆ ಹಾಗೂ ಶಿಗ್ಗಾಂವ- ಸವಣೂರು ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಇಂದು ಶಿಗ್ಗಾಂವ ವಿಧಾನಸಭಾ ಮತಕ್ಷೇತ್ರದ @BJP4Karnataka ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದೆನು. #BJPYeBharavase pic.twitter.com/VJFNn86tZl
— Basavaraj S Bommai (@BSBommai) April 15, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.