ಲಕ್ನೋ: ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ಶನಿವಾರ ರಾತ್ರಿ ಗ್ಯಾಂಗ್ಸ್ಟ್ ಕಂ ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರನ ಹತ್ಯೆಯ ನಂತರ ಯೋಗಿ ಆದಿತ್ಯನಾಥ್ ಅವರು ಭಾನುವಾರ ಲಕ್ನೋದಲ್ಲಿ ಹಿರಿಯ ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳೊಂದಿಗೆ ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯನ್ನು ಪರಿಶೀಲಿಸಿದರು.
ಡಿಜಿಪಿ ಮತ್ತು ವಿಶೇಷ ಡಿಜಿ ಕಾನೂನು ಮತ್ತು ಸುವ್ಯವಸ್ಥೆ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಕರಣದ ಇತ್ತೀಚಿನ ಬೆಳವಣಿಗೆಯ ಬಗ್ಗೆ ಮುಖ್ಯಮಂತ್ರಿಗೆ ಮಾಹಿತಿಯನ್ನು ನೀಡಿದ್ದಾರೆ. ಅತೀಕ್ ಹಾಗೂ ಆತನ ಸಹೋದರನ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ಮೂವರೂ ಆರೋಪಿಗಳನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಅವರನ್ನು ನ್ಯಾಯಾಲಯವು 14 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸ್ಥಿರವಾಗಿದೆ ಮತ್ತು ಯಾವುದೇ ಅಹಿತಕರ ಘಟನೆಯ ವರದಿಯಾಗಿಲ್ಲ.
ಈ ನಡುವೆ, ಅತೀಕ್ ಮತ್ತು ಅವರ ಸಹೋದರ ಅಶ್ರಫ್ ಮರಣೋತ್ತರ ಪರೀಕ್ಷೆಯನ್ನು ವೈದ್ಯರ ಸಮಿತಿ ನಡೆಸಿದ್ದು, ಆಡಳಿತದಿಂದ ವೀಡಿಯೊಗ್ರಫಿ ಕೂಡ ನಡೆಸಲಾಗಿದೆ. ಅವರ ಪಾರ್ಥಿವ ಶರೀರವನ್ನು ಅಂತಿಮ ವಿಧಿವಿಧಾನಕ್ಕಾಗಿ ಕುಟುಂಬ ಸದಸ್ಯರಿಗೆ ಹಸ್ತಾಂತರಿಸಲಾಗಿದೆ.
ರಾಜ್ಯದ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಹೆಚ್ಚಿನ ನಿಗಾ ವಹಿಸಿದ್ದು, ವಾಹನಗಳ ತೀವ್ರ ತಪಾಸಣೆ ನಡೆಯುತ್ತಿದೆ. ಪ್ರಯಾಗರಾಜ್ನ ಚಾಕಿಯಾ, ಬೆನಿಗಂಜ್, ಧುಮ್ಗಂಜ್ ಪ್ರದೇಶಗಳ ಜೊತೆಗೆ ಅತೀಕ್ ಅಹ್ಮದ್ ನೆಲೆಯನ್ನು ಹೊಂದಿರುವ ಇತರ ಪ್ರದೇಶಗಳಲ್ಲಿ ಭಾರೀ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಪ್ರಯಾಗರಾಜ್ ಜಿಲ್ಲೆಯಲ್ಲಿ ಇಂಟರ್ನೆಟ್ ಸೇವೆಯನ್ನು ಸ್ಥಗಿತಗೊಳಿಸಲಾಗಿದ್ದು, ಸೆಕ್ಷನ್ 144 ಜಾರಿಗೊಳಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.