ಬೆಂಗಳೂರು: ಇಂದು ಏಪ್ರಿಲ್ 20, ಕರ್ನಾಟಕ ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ನಿನ್ನೆ ಹಲವು ಹಿರಿಯ ನಾಯಕರು ನಾಮಪತ್ರ ಸಲ್ಲಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿನ್ನೆ ಶಿಗ್ಗಾಂವ ಕ್ಷೇತ್ರದಿಂದ ರೋಡ್ ಶೋ ನಡೆಸಿ ನಾಮಪತ್ರ ಸಲ್ಲಿಸಿದರು. ವರುಣಾ ಕ್ಷೇತ್ರದಿಂದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ನಾಮಪತ್ರ ಸಲ್ಲಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಜಗದೀಶ್ ಶೆಟ್ಟರ್ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸಭೆ ಚುನಾವಣೆಗೆ ನಿನ್ನೆ 62 ಮಹಿಳೆಯರು ಸೇರಿದಂತೆ 935 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಇಲ್ಲಿಯವರೆಗೆ ಮೂರು ಸಾವಿರಕ್ಕೂ ಹೆಚ್ಚು ನಾಮಪತ್ರಗಳು ಸಲ್ಲಿಕೆಯಾಗಿವೆ.
ಒಂದೇ ಬಾರಿಗೆ ಮೇ 10ರಂದು ಚುನಾವಣೆ ನಡೆಯಲಿದೆ. ಮೇ 13ರಂದು ಫಲಿತಾಂಶ ಹೊರಬೀಳಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.