ನವದೆಹಲಿ: ಭಾರತೀಯ ಯುವ ಕಾಂಗ್ರೆಸ್ ಮುಖ್ಯಸ್ಥ ಬಿ.ವಿ ಶ್ರೀನಿವಾಸ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪಗಳನ್ನು ಮಾಡಿದ್ದ ಅಸ್ಸಾಂ ಯುವ ಕಾಂಗ್ರೆಸ್ ಅಧ್ಯಕ್ಷೆ ಅಂಗ್ಕಿತಾ ದತ್ತಾ ಅವರನ್ನು ಆರು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಲಾಗಿದೆ. ನಂತರ ಈ ಕ್ರಮ ಕೈಗೊಳ್ಳಲಾಗಿದೆ.
ಕೂಡಲೇ ಜಾರಿಗೆ ಬರುವಂತೆ ಅಸ್ಸಾಂ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಅಂಗ್ಕಿತಾ ದತ್ತಾ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಿ, ಕಾಂಗ್ರೆಸ್ನ ಶಿಸ್ತು ಕ್ರಿಯಾ ಸಮಿತಿಯ ಸದಸ್ಯ ಕಾರ್ಯದರ್ಶಿ ತಾರಿಕ್ ಅನ್ವರ್ ಆದೇಶದಲ್ಲಿ ತಿಳಿಸಿದ್ದಾರೆ.
ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಸಮರ್ಥನೆ ನೀಡಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಂಕಿತಾ ದಾಸ್, “ಹಿಂದಿನ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಕೇಶವ್ ಕುಮಾರ್ ಲೈಂಗಿಕ ಕಿರುಕುಳ ನೀಡಿದಾಗ ಅವರನ್ನು ತೆಗೆದುಹಾಕುವಂತೆ ಒತ್ತಾಯಿಸಲಾಗಿತ್ತು. ಈಗ 6 ತಿಂಗಳಿನಿಂದ ಬಿ ವಿ ಶ್ರೀನಿವಾಸ್ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದರೂ ಯಾವುದೇ ವಿಚಾರಣೆ ಪ್ರಾರಂಭಿಸಿಲ್ಲ. ಇದು ನನ್ನ ರಾಜಕೀಯ ವೃತ್ತಿಜೀವನದ ಅಂತ್ಯಕ್ಕೆ ಕಾರಣವಾಗಬಹುದು ಎಂಬುದು ತಿಳಿದಿದೆ. ಇದಕ್ಕೆ ಬೆಲೆ ತೆರಬೇಕಾದರೆ, ಅದಕ್ಕೂ ಸಿದ್ದನಿದ್ದೇನೆ. ನಾನು ಬಿಜೆಪಿ ನಾಯಕರನ್ನು ಭೇಟಿ ಮಾಡಿದ್ದೇನೆ ಎಂಬ ಅನುಮಾನವಿದ್ದಲ್ಲಿ ಬಂದು ನನ್ನ ಮನೆ ಮತ್ತು ಕಚೇರಿಯ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಲಿ” ಎಂದಿದ್ದಾರೆ.
ಅಂಗ್ಕಿತಾ ದತ್ತಾ ಅವರನ್ನು ಪಕ್ಷದಿಂದ ಉಚ್ಛಾಟಿಸಿರುವ ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ. ಇದು ಅದರ ಮಹಿಳಾ ಸಬಲೀಕರಣದ ಮಾದರಿಯಾಗಿದೆ ಎಂದು ಟೀಕಿಸಿದೆ.
Congress expels Assam Youth Congress president Angkita Dutta from the party for six years, for "anti-party activities."
She had recently alleged harassment by Indian Youth Congress (IYC) president Srinivas BV & his IYC secretary in-charge Vardhan Yadav for the past 6 months.… pic.twitter.com/rlVLdouQ7f
— ANI (@ANI) April 22, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.