ನವದೆಹಲಿ: ಆರೋಗ್ಯಕರ ಭಾರತವನ್ನು ಸಾಧಿಸುವುದು ಪ್ರಧಾನಿ ನರೇಂದ್ರ ಮೋದಿಯವರ ಗುರಿಯಾಗಿದೆ ಮತ್ತು ಕೇಂದ್ರ ಸರ್ಕಾರ ಈ ದಿಸೆಯಲ್ಲಿ ಹಲವಾರು ಉಪಕ್ರಮಗಳನ್ನು ಕೈಗೊಂಡಿದೆ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವ ಜಿ ಕಿಶನ್ ರೆಡ್ಡಿ ಅವರು ಹೇಳಿದ್ದಾರೆ.
ಹೈದರಾಬಾದ್ನಲ್ಲಿ ನಡೆದ ಆರೋಗ್ಯಕರ ಶಿಶು ಪ್ರದರ್ಶನ ಕಾರ್ಯಕ್ರಮದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನವಜಾತ ಶಿಶುಗಳಿಗೆ ತಾಯಿಯ ಹಾಲು ಅತ್ಯುತ್ತಮ ಆಹಾರವಾಗಿದೆ. ತಾಯಿಯೇ ತನ್ನ ಮಕ್ಕಳಿಗೆ ಅತ್ಯುತ್ತಮ ವೈದ್ಯೆ ಎಂದು ಹೇಳಿದರು.
ದೇಶದ ಮಕ್ಕಳಿಗೆ ಪೌಷ್ಟಿಕ ಆಹಾರ ನೀಡಲು ಕೇಂದ್ರ ಸರ್ಕಾರ ಹಲವಾರು ಕಾರ್ಯಕ್ರಮಗಳನ್ನು ಜಾರಿಗೊಳಿಸುತ್ತಿದೆ. ಮಹಿಳೆಯರು ಅನುಭವಿಸುತ್ತಿರುವ ಎಲ್ಲಾ ಸಾಮಾಜಿಕ ಅನಿಷ್ಟಗಳನ್ನು ತೊಡೆದುಹಾಕಲು ಸರ್ಕಾರ ಕ್ರಮಗಳನ್ನು ಕೈಗೊಳ್ಳುವುದು ಮಾತ್ರವಲ್ಲದೆ ಹೆಣ್ಣು ಮಕ್ಕಳ ಪೋಷಕರಿಗೆ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುತ್ತಿದೆ ಎಂದು ಹೇಳಿದರು.
ತಾಯಿಯ ಹಾಲಿನ ಮಹತ್ವವನ್ನು ತಿಳಿಸಲು ದೇಶದ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ 3-13 ತಿಂಗಳ ವಯಸ್ಸಿನ ಮಕ್ಕಳಿಗಾಗಿ ಆರೋಗ್ಯವಂತ ಶಿಶು ಪ್ರದರ್ಶನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಪ್ರಧಾನಮಂತ್ರಿ ಅವರು ಕೇಳಿಕೊಂಡಿದ್ದಾರೆ ಎಂದು ಅವರು ಹೇಳಿದರು. ಇದೇ ಸಂದರ್ಭದಲ್ಲಿ ರೆಡ್ಡಿ ಮಕ್ಕಳಿಗೆ ಆರೋಗ್ಯ ಕಿಟ್ ಹಾಗೂ ಪ್ರಮಾಣ ಪತ್ರ ವಿತರಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.