ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ದೂರುಗಳ ಬಗ್ಗೆ ನ್ಯಾಯಯುತ ತನಿಖೆಯನ್ನು ಕೋರಿ ಭಾರತದ ಅಗ್ರ ಕುಸ್ತಿಪಟುಗಳು ಇಂದು ಸುಪ್ರೀಂ ಕೋರ್ಟ್ಗೆ ಮೊರೆ ಹೋಗಿದ್ದಾರೆ.
ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು, ಪೊಲೀಸರು ಪ್ರಕರಣದಲ್ಲಿ ಎಫ್ಐಆರ್ ದಾಖಲಿಸುವವರೆಗೆ ಪ್ರತಿಭಟನಾ ಸ್ಥಳದಲ್ಲಿಯೇ ಇರುವುದಾಗಿ ಹೇಳಿದ್ದಾರೆ. ಕ್ರೀಡಾ ಸಚಿವಾಲಯದ ಭರವಸೆಯ ನಂತರ ಅಥ್ಲೀಟ್ಗಳು ಜನವರಿಯಲ್ಲಿ ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿದ್ದರು, ಆದರೆ WFI ಮುಖ್ಯಸ್ಥರ ವಿರುದ್ಧ ಇನ್ನೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಮತ್ತೆ ಪ್ರತಿಭಟನೆಗೆ ಹಿಂದಿರುಗಿದ್ದಾರೆ.
“ನಾವು ಯಾರನ್ನೂ ಕುರುಡಾಗಿ ನಂಬುವುದಿಲ್ಲ. ಕಳೆದ ಬಾರಿ ನಾವು ದಾರಿ ತಪ್ಪಿದ್ದೆವು. ಈ ಬಾರಿ ಈ ಪ್ರಕರಣದಲ್ಲಿ ಯಾವುದೇ ರಾಜಕೀಯವಿಲ್ಲ ಎಂದು ನಾವು ಭಾವಿಸುತ್ತೇವೆ” ಎಂದು ಕಾಮನ್ವೆಲ್ತ್ ಮತ್ತು ಏಷ್ಯನ್ ಗೇಮ್ಸ್ನಲ್ಲಿ ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಹೇಳಿದ್ದಾರೆ.
ಭಾರತೀಯ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳದ ಆರೋಪದ ಕುರಿತು ತನಿಖೆ ನಡೆಸಲು ಭಾರತೀಯ ಒಲಿಂಪಿಕ್ ಸಂಸ್ಥೆ (ಐಒಎ)ಯು ಏಳು ಸದಸ್ಯರ ಸಮಿತಿಯನ್ನು ರಚಿಸಿತ್ತು. ಒಲಿಂಪಿಕ್ ಪದಕ ವಿಜೇತೆ ಮೇರಿ ಕೋಮ್, ಮಾಜಿ ಆರ್ಚರಿ ಪಟು ಡೋಲಾ ಬ್ಯಾನರ್ಜಿ, ಅಲಕಂಡ ಅಶೋಕ್, ಲಂಡನ್ ಒಲಿಂಪಿಕ್ ಪದಕ ವಿಜೇತ ಯೋಗೇಶ್ವರ್ ದತ್, ಭಾರತದ ವೈಟ್ಲಿಫ್ಟಿಂಗ್ ಅಧ್ಯಕ್ಷ ಸಹದೇವ್ ಯಾದವ್ ಹಾಗೂ ಇಬ್ಬರು ವಕೀಲರು ಈ ಸಮಿತಿಯ ಸದಸ್ಯರಾಗಿದ್ದರು. ಆದರೆ ಸಮಿತಿಯ ಕಾರ್ಯ ಕ್ರೀಡಾಪಟುಗಳ ಅಸಮಾಧಾನಕ್ಕೆ ಕಾರಣವಾಗಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.