ಭೋಪಾಲ್: ಹಳ್ಳಿಗಳು ಮತ್ತು ನಗರಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ರಾಷ್ಟ್ರೀಯ ಪಂಚಾಯತ್ ರಾಜ್ ದಿನಾಚರಣೆಯ ಸಂದರ್ಭದಲ್ಲಿ ಇಂದು ಮಧ್ಯಪ್ರದೇಶದ ರೇವಾದಲ್ಲಿ ದೇಶದ ಎಲ್ಲಾ ಗ್ರಾಮ ಸಭೆಗಳು ಮತ್ತು ಪಂಚಾಯತ್ ರಾಜ್ ಸಂಸ್ಥೆಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಡಿಜಿಟಲ್ ಕ್ರಾಂತಿಯ ಈ ಯುಗದಲ್ಲಿ ಪಂಚಾಯತ್ಗಳನ್ನು ಸ್ಮಾರ್ಟ್ ಮಾಡಲಾಗುತ್ತಿದೆ. ಪಂಚಾಯತ್ಗಳು ಕೈಗೊಳ್ಳುತ್ತಿರುವ ಯೋಜನೆಗಳಲ್ಲಿ ತಂತ್ರಜ್ಞಾನವನ್ನು ಬಳಸಿಕೊಳ್ಳಲಾಗುತ್ತಿದೆ ಎಂದರು.
ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ರಚಿಸಲು ಭಾರತದ ಹಳ್ಳಿಗಳಲ್ಲಿ ಸಾಮಾಜಿಕ ವ್ಯವಸ್ಥೆ, ಆರ್ಥಿಕತೆ ಮತ್ತು ಪಂಚಾಯತ್ ರಾಜ್ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸುವ ಪ್ರಾಮುಖ್ಯತೆಯನ್ನು ಎತ್ತಿ ತೋರಿಸಿದ ಪ್ರಧಾನಿ, ಪ್ರಸ್ತುತ ಸರ್ಕಾರವು ದೃಢವಾದ ವ್ಯವಸ್ಥೆಯನ್ನು ರಚಿಸಲು ಮತ್ತು ಅದರ ವ್ಯಾಪ್ತಿಯನ್ನು ವಿಸ್ತರಿಸಲು ಅವಿರತವಾಗಿ ಶ್ರಮಿಸುತ್ತಿದೆ ಎಂದು ತಿಳಿಸಿದರು.
2014 ರ ಮೊದಲು ಹಿಂದಿನ ಸರ್ಕಾರಗಳು ಮಾಡಿದ ಪ್ರಯತ್ನಗಳ ಕೊರತೆಯ ಬಗ್ಗೆ ಬೆಳಕು ಚೆಲ್ಲಿರುವ ಪ್ರಧಾನಿ, ಹಣಕಾಸು ಆಯೋಗವು 70,000 ಕೋಟಿ ರೂಪಾಯಿಗಳಿಗಿಂತ ಕಡಿಮೆ ಅನುದಾನವನ್ನು ನೀಡಿದ್ದು, ಇದು ದೇಶದ ಪ್ರಮಾಣವನ್ನು ಪರಿಗಣಿಸಿದಾಗ ಅತ್ಯಲ್ಪ ಮೊತ್ತವಾಗಿದೆ, ಆದರೆ 2014 ರ ನಂತರ ಈ ಅನುದಾನ ಎರಡು ಲಕ್ಷ ಕೋಟಿ ರೂ.ಗಳಿಗೂ ಹೆಚ್ಚಿದೆ.
2014 ರ ಮೊದಲು ಕೇವಲ 6,000 ಪಂಚಾಯತ್ ಭವನಗಳನ್ನು ನಿರ್ಮಿಸಲಾಗಿದೆ , ಆದರೆ ಪ್ರಸ್ತುತ ಸರ್ಕಾರವು ಕಳೆದ ಎಂಟು ವರ್ಷಗಳಲ್ಲಿ 30,000 ಕ್ಕೂ ಹೆಚ್ಚು ಪಂಚಾಯತ್ ಭವನಗಳನ್ನು ನಿರ್ಮಿಸಿದೆ. 70 ಕ್ಕಿಂತ ಕಡಿಮೆ ಗ್ರಾಮ ಪಂಚಾಯಿತಿಗಳು ಆಪ್ಟಿಕಲ್ ಫೈಬರ್ ಸಂಪರ್ಕ ಹೊಂದಿವೆ ಎಂದು ಅವರು ಮಾಹಿತಿ ನೀಡಿದರು.
ಈ ಸಮಾರಂಭದಲ್ಲಿ ಪ್ರಧಾನಮಂತ್ರಿಯವರು 17 ಸಾವಿರ ಕೋಟಿಗೂ ಅಧಿಕ ಮೊತ್ತದ ಯೋಜನೆಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.