ಲಕ್ನೋ: ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ಗೆ ಜೀವ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಪೊಲೀಸರು ಲಕ್ನೋದಲ್ಲಿ ಅಪರಿಚಿತ ಕರೆ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಪೊಲೀಸರ ಪ್ರಕಾರ, ಉತ್ತರ ಪ್ರದೇಶ ಸರ್ಕಾರವು ತುರ್ತು ಸೇವೆಗಳಿಗಾಗಿ ಪ್ರಾರಂಭಿಸಿದ ಸಂಖ್ಯೆ ‘ಡಯಲ್ 112’ ಮೂಲಕ ಬೆದರಿಕೆ ಬಂದಿದೆ. ಕರೆಯ ಸಮಯದಲ್ಲಿ, ವ್ಯಕ್ತಿ “ಸಿಎಂ ಯೋಗಿಯನ್ನು ಶೀಘ್ರದಲ್ಲೇ ಕೊಲ್ಲುತ್ತೇನೆ” ಎಂದು ಬೆದರಿಕೆ ಹಾಕಿದ್ದಾನೆ. ಬೆದರಿಕೆಯನ್ನು ಸ್ವೀಕರಿಸಿದ ನಂತರ ‘112’ ಆಪರೇಷನ್ ಕಮಾಂಡರ್ ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಭಾರತೀಯ ದಂಡ ಸಂಹಿತೆ (IPC) ಸೆಕ್ಷನ್ 506, 507 ಮತ್ತು IT ಕಾಯಿದೆ 66 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ‘ಡಯಲ್ 112’ ಗೆ ಜೀವ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಪಿಎಸ್ ಸುಶಾಂತ್ ಗಾಲ್ಫ್ ಸಿಟಿಯಲ್ಲಿ 506 ಮತ್ತು 507 ಐಪಿಸಿ ಮತ್ತು 66 ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.