ತಿರುವನಂತಪುರಂ: ಕೇರಳದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡಿದ ಕೆಲವೇ ಸಮಯದಲ್ಲಿ ಕಾಂಗ್ರೆಸ್ಸಿಗರು ಈ ಕಾರ್ಯದ ಕ್ರೆಡಿಟ್ ತೆಗೆದುಕೊಳ್ಳಲು ಮುಂದಾಗಿದ್ದಾರೆ.
ರೈಲು ಚೊಚ್ಚಲ ಪ್ರಯಾಣ ನಡೆಸಿ ಕೇರಳದ ಪಾಲಕ್ಕಾಡ್ ಪ್ರದೇಶದ ಶೋರನೂರ್ ತಲುಪಿದ ತಕ್ಷಣ ಅದರ ಕಿಟಕಿಗಳ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ಪಾಲಕ್ಕಾಡ್ ಸಂಸದ ವಿಕೆ ಶ್ರೀಕಂದನ್ ಅವರನ್ನು ಶ್ಲಾಘಿಸುವ ಪೋಸ್ಟರ್ಗಳನ್ನು ಅಂಟಿಸಿದ್ದಾರೆ. ಅವರಿಂದಲೇ ವಂದೇ ಭಾರತ್ ಎಕ್ಸ್ಪ್ರೆಸ್ ಬಂತು ಎಂಬಂತೆ ಬಿಂಬಿಸಿದ್ದಾರೆ.
ಇದೀಗ ಪೋಸ್ಟರ್ ಅಂಟಿಸಿ ರೈಲನ್ನು ವಿರೂಪಗೊಳಿಸಿದವರ ವಿರುದ್ಧ ರೈಲ್ವೆ ಪ್ರೊಟೆಕ್ಷನ್ ಫೋರ್ಸ್ ಪ್ರಕಣ ದಾಖಲಿಸಿಕೊಂಡಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಂಗಳವಾರ ಕೇರಳದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಚಾಲನೆ ನೀಡಿದ್ದಾರೆ. ಇದು ತಿರುವನಂತಪುರವನ್ನು ಕಾಸರಗೋಡಿನೊಂದಿಗೆ ಸಂಪರ್ಕಿಸುತ್ತದೆ, ಕೊಲ್ಲಂ, ಕೊಟ್ಟಾಯಂ, ಎರ್ನಾಕುಲಂ ಟೌನ್, ತ್ರಿಶೂರ್, ಶೋರನೂರ್ ಜಂಕ್ಷನ್, ಕೋಯಿಕ್ಕೋಡ್, ಕಣ್ಣೂರು ಮತ್ತು ಕಾಸರಗೋಡುಗಳಲ್ಲಿ ನಿಲುಗಡೆಗಳನ್ನು ಹೊಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.