ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಚಂಡೀಗಢದ ಎಸ್ಎಡಿ ಪ್ರಧಾನ ಕಚೇರಿಯಲ್ಲಿ ಪಂಜಾಬ್ನ ಅಗಲಿದ ಮಾಜಿ ಮುಖ್ಯಮಂತ್ರಿ ಮತ್ತು ಶಿರೋಮಣಿ ಅಕಾಲಿದಳದ ಹಿರಿಯ ನಾಯಕ ಪ್ರಕಾಶ್ ಸಿಂಗ್ ಬಾದಲ್ ಅವರಿಗೆ ಅಂತಿಮ ನಮನ ಸಲ್ಲಿಸಿದರು.
ಏಪ್ರಿಲ್ 25 ರಂದು ಮೊಹಾಲಿಯಲ್ಲಿ ಬಾದಲ್ ಕೊನೆಯುಸಿರೆಳೆದರು. ಅವರಿಗೆ 95 ವರ್ಷ ವಯಸ್ಸಾಗಿತ್ತು. ಐದು ಬಾರಿ ಮುಖ್ಯಮಂತ್ರಿಯಾಗಿದ್ದ ಬಾದಲ್ ಅವರು ಉಸಿರಾಟದ ತೊಂದರೆಯ ಭಾನುವಾರ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಾಗಿದ್ದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಶಿರೋಮಣಿ ಅಕಾಲಿದಳದ ನಾಯಕನ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಕೂಡ ನಾಯಕನ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಅವರ ಪಾರ್ಥಿವ ಶರೀರವನ್ನು ಪಂಜಾಬ್ನ ಅವರ ಸ್ವಗ್ರಾಮ ಬಾದಲ್ಗೆ ಕೊಂಡೊಯ್ಯಲಾಗುವುದು ಮತ್ತು ಅವರ ಅಂತಿಮ ವಿಧಿಗಳನ್ನು ನಾಳೆ ಮಧ್ಯಾಹ್ನ ನೆರವೇರಿಸಲಾಗುವುದು. ಇಂದು ಮತ್ತು ನಾಳೆ ಎರಡು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಸರ್ಕಾರ ಘೋಷಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.