ನವದೆಹಲಿ: ಭಾರತೀಯ ಕುಸ್ತಿ ಪ್ರಾಧಿಕಾರದ(ಡಬ್ಲ್ಯುಎಫ್ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವವರೆಗೂ ನಮ್ಮ ಪ್ರತಿಭಟನೆ ಮುಂದುವರೆಯಲಿದೆ ಎಂದು ಪ್ರತಿಭಟನಾ ನಿರತ ಕುಸ್ತಿಪಟುಗಳು ಶುಕ್ರವಾರ ಘೋಷಿಸಿದ್ದಾರೆ. ಬ್ರಿಜ್ ಭೂಷಣ್ ಅವರು ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿದ್ದಾರೆ.
ಕುಸ್ತಿಪಟುಗಳ ಪ್ರತಿಭಟನೆಗೆ ಮಣಿದು ಈಗಾಗಲೇ ಬ್ರಿಜ್ ಭೂಷಣ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಆದರೂ ತಮಗೆ ದೆಹಲಿ ಪೊಲೀಸರ ಮೇಲೆ ನಂಬಿಕೆ ಇಲ್ಲ. ಹೀಗಾಗಿ ಅವರನ್ನು ಬಂಧಿಸುವವರೆಗೂ ಪ್ರತಿಭಟನೆ ನಡೆಸುವುದಾಗಿ ಕುಸ್ತಿಪಟುಗಳು ಪಟ್ಟು ಹಿಡಿದಿದ್ದಾರೆ.
ಸುಪ್ರೀಂ ಕೋರ್ಟ್ನ ಆದೇಶವನ್ನು ಗೌರವಿಸುತ್ತೇವೆ. ಆದರೆ ತಮಗೆ ದೆಹಲಿ ಪೊಲೀಸರ ಮೇಲೆ ಯಾವುದೇ ನಂಬಿಕೆಯಿಲ್ಲ ಮತ್ತು ನಮ್ಮ ಹೋರಾಟ ಎಫ್ಐಆರ್ಗೆ ಸೀಮಿತವಾಗಿಲ್ಲ ಎಂದಿದ್ದಾರೆ.
ಬ್ರಿಜ್ ಭೂಷಣ್ ಸಿಂಗ್ ಅವರಂತಹವರನ್ನು ಶಿಕ್ಷೆಗೆ ಗುರಿಪಡಿಸುವುದು ಮತ್ತು ಅವರನ್ನು ಹುದ್ದೆಯಿಂದ ತೆಗೆದುಹಾಕುವಂತೆ ಮಾಡಲು ನಮ್ಮ ಹೋರಾಟ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.