ವಿಜಯಪುರ: ಬಿಜೆಪಿಯ ಡಬಲ್ ಎಂಜಿನ್ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವಾಗಿದೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ಗೆ ಭಗವಾನ್ ಬಸವಣ್ಣ ಸ್ಫೂರ್ತಿ. ಕಾಯಕ ಮತ್ತು ದಾಸೋಹದ ಪ್ರೇರಣೆ ನಮ್ಮ ಅಭಿವೃದ್ಧಿ ಯೋಜನೆಗಳ ಹಿಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ವಿಜಯಪುರದ ಸೈನಿಕ ಶಾಲೆ ಆವರಣದಲ್ಲಿ ಆಯೋಜಿಸಲಾಗಿರುವ ಬಿಜೆಪಿ ಸಮಾವೇಶದಲ್ಲಿ ಮಾತನಾಡಿರುವ ಅವರು, ಆದಿವಾಸಿ, ಮಹಿಳೆಯರು, ದಲಿತರು ಸೇರಿದಂತೆ ಎಲ್ಲ ವರ್ಷಗಗಳ ಅಭಿವೃದ್ಧಿಗೆ ಬದ್ಧರಾಗಿದ್ದೇವೆ. ಅನ್ನ, ಆಶ್ರಯ, ಅಕ್ಷರಕ್ಕಾಗಿ ಡಬಲ್ ಎಂಜಿನ್ ಸರ್ಕಾರ ಕೆಲಸ ಮಾಡಿದೆ ಎಂದು ತಿಳಿಸಿದರು.
ಸಾವಿರಾರು ಕುಟುಂಬಗಳಿಗೆ ನಮ್ಮ ಸರ್ಕಾರ ಭೂಮಿ ಹಕ್ಕುಪತ್ರ ವಿತರಣೆ ಮಾಡಿದೆ. ವಂಚಿತರಿಗೆ ಸರ್ಕಾರದ ಸೌಲಭ್ಯ ತಲುಪಿಸುವುದು ನಮ್ಮ ಗುರಿ. ಸಾಮಾಜಿಕ ನ್ಯಾಯ ಒದಗಿಸಲು ಬಿಜೆಪಿಯ ಡಬಲ್ ಎಂಜಿನ್ ಸರ್ಕಾರ ಅನೇಕ ಕೆಲಸ ಮಾಡಿದೆ. ಇದಕ್ಕೆ ಅನೇಕ ಉದಾಹರಣೆಗಳಿವೆ ಎಂದರು.
ಕಾಂಗ್ರೆಸ್ ಸರ್ಕಾರವು ಬಂಜಾರ, ಲಂಬಾಣಿ ಸಮುದಾಯದವರಿಗೆ ಏನೂ ಮಾಡಿಲ್ಲ. ಕಾಂಗ್ರೆಸ್ ಸರ್ಕಾರವು ಭಗವಾನ್ ಬಸವಣ್ಣರ ತತ್ವಗಳ ಅನುಷ್ಠಾನಕ್ಕೆ ಏನೂ ಮಾಡಿಲ್ಲ ಎಂದು ಆರೋಪಿಸಿದರು.
ಕೇಂದ್ರದಿಂದ 1 ರೂಪಾಯಿ ಬಿಡುಗಡೆ ಮಾಡಿದ್ದರೆ ಫಲಾನುಭವಿಗೆ 15 ಪೈಸೆ ಮಾತ್ರ ದೊರೆಯುತ್ತದೆ ಎಂಬುದನ್ನು ಕಾಂಗ್ರೆಸ್ ಪಕ್ಷದ ಪ್ರಧಾನಮಂತ್ರಿಯವರೇ ಹೇಳಿದ್ದರು. ಪಂಚಾಯತಿಯಿಂದ ಹಿಡಿದು ಸಂಸತ್ತಿನವರೆಗೆ ಕಾಂಗ್ರೆಸ್ ಹಿಡಿತದಲ್ಲಿದ್ದಾಗ ಪರಿಸ್ಥಿತಿ ಹಾಗಿತ್ತು. ಭ್ರಷ್ಟಾಚಾರ ತೊಡೆದುಹಾಕಲು ಏನೂ ಕ್ರಮ ಕೈಗೊಂಡಿರಲಿಲ್ಲ. ಬಡ ಜನರಿಗೆ ಸಲ್ಲಬೇಕಾದ ದುಡ್ಡನ್ನು ಲೂಟಿ ಮಾಡಲಾಗುತ್ತಿತ್ತು. ನೇರ ನಗದು ವರ್ಗಾವಣೆ ಮೂಲಕ ನಮ್ಮ ಸರ್ಕಾರ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದೆ. ಈಗ ಎಲ್ಲ ಲಾಭಾ ಫಲಾನುಭವಿಗಳಿಗೆ ನೇರವಾಗಿ ತಲುಪುತ್ತಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.