ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಇಂದು ಸಂಜೆ ಪ್ರಚಾರ ಅಂತ್ಯವಾಗಲಿದೆ. ಈ ಹಿನ್ನೆಲೆಯಲ್ಲಿ ಕೊನೆಯ ಪ್ರಯತ್ನವಾಗಿ ಇಂದು ಬಿಜೆಪಿ, ಕಾಂಗ್ರೆಸ್, ಎಎಪಿ ಮತ್ತು ಜೆಡಿಎಸ್ನ ಹಲವಾರು ನಾಯಕರು ರೋಡ್ ಶೋಗಳನ್ನು ನಡೆಸಿ ಮತದಾರರನ್ನು ತಲುಪುವ ಪ್ರಯತ್ನ ನಡೆಸಲಿದ್ದಾರೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಉಡುಪಿಯಲ್ಲಿ ಬಿಜೆಪಿ ಪರ ರೋಡ್ ಶೋ ನಡೆಸಲಿದ್ದಾರೆ, ಕೇಂದ್ರ ಸಚಿವ ವಿ ಕೆ ಸಿಂಗ್ ಬೆಂಗಳೂರಿನಲ್ಲಿ ಬುದ್ಧಿಜೀವಿಗಳು ಮತ್ತು ಉದ್ಯಮಿಗಳೊಂದಿಗೆ ಸಂವಾದ ನಡೆಸಲಿದ್ದಾರೆ ಮತ್ತು ಇನ್ನೋರ್ವ ಕೇಂದ್ರ ಸಚಿವ ಎಲ್ ಮುರುಗನ್ ಬೆಂಗಳೂರಿನಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ಕಲಬುರಗಿ ಮತ್ತು ಬಳ್ಳಾರಿಯಲ್ಲಿ ಸಾರ್ವಜನಿಕ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಜೆಡಿಎಸ್ ಮುಖಂಡರಾದ ದೇವೇಗೌಡ ಮತ್ತು ಅವರ ಪುತ್ರ ಹೆಚ್ ಡಿ ಕುಮಾರಸ್ವಾಮಿ ಇಂದು ಬೆಂಗಳೂರಿನಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದಾರೆ. ಎಎಪಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಬೆಂಗಳೂರಿನ ಬಿಟಿಎಂ ಲೇಔಟ್, ಸಿ ವಿ ರಾಮನ್ ನಗರ, ಸರ್ವಜ್ಞ ನಗರ ಮತ್ತು ಪುಲಿಕೇಶಿ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ರೋಡ್ ಶೋ ನಡೆಸಲಿದ್ದಾರೆ.
ಮೇ 10ಕ್ಕೆ ಮತದಾನ ನಡೆಯಲಿದ್ದು, ಮೇ 13ರಂದು ಫಲಿತಾಂಶ ಪ್ರಕಟವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.