ನವದೆಹಲಿ: ಮುಂದಿನ ವರ್ಷದ ಗಣರಾಜ್ಯೋತ್ಸವವು ಎಲ್ಲಾ ಆಯಾಮದಲ್ಲೂ ಸಂಪೂರ್ಣ ಮಹಿಳೆಯರ ಪರೇಡ್ ಅನ್ನು ಹೊಂದಿರಲಿದೆ. ಮೆರವಣಿಗೆ, ಬ್ಯಾಂಡ್ಗಳು, ಟೇಬಲ್ಆಕ್ಸ್ ಮತ್ತು ಪ್ರದರ್ಶನಗಳು ಸೇರಿದಂತೆ ಎಲ್ಲಾ ಆಯಾಮದಲ್ಲಿ ಮಹಿಳೆಯರ ಪ್ರತ್ಯೇಕ ಪ್ರದರ್ಶನ ಇರಲಿದೆ ಎಂದು ಎಂದು ಸರ್ಕಾರಿ ಮೂಲಗಳು ತಿಳಿಸಿವೆ.
ಮಿಲಿಟರಿ ಮತ್ತು ಇತರ ಪ್ರದೇಶಗಳಲ್ಲಿ ಸ್ತ್ರೀ ಸಬಲೀಕರಣ ಮತ್ತು ಪ್ರಾತಿನಿಧ್ಯವನ್ನು ಉತ್ತೇಜಿಸುವ ಪ್ರಯತ್ನದ ಭಾಗವಾಗಿ, ಈ ನಿರ್ಧಾರವನ್ನು ಸಶಸ್ತ್ರ ಪಡೆಗಳು ಮತ್ತು ಸರ್ಕಾರಿ ಇಲಾಖೆಗಳಿಗೆ ತಿಳಿಸಲಾಗಿದೆ.
ಪ್ರಸ್ತುತ ಈ ನಿರ್ಧಾರವನ್ನು ಅನುಷ್ಠಾನಕ್ಕೆ ಯೋಜಿಸಲಾಗಿದೆ ಎಂದು ವರದಿಗಳು ಹೇಳಿವೆ.
ವರದಿಗಳ ಪ್ರಕಾರ, ಜನವರಿ 26 ರಂದು ಗಣರಾಜ್ಯೊತ್ಸವದ ಅಂಗವಾಗಿ ಆಯೋಜಿಸುವ ವಾರ್ಷಿಕ ಮೆರವಣಿಗೆಗೆ ಸಂಬಂಧಿಸಿದಂತೆ ಆಯೋಜಕರಿಗೆ ಮಾರ್ಚ್ನಲ್ಲಿ ಈ ಬಗ್ಗೆ ಟಿಪ್ಪಣಿಯನ್ನು ಕಳುಹಿಸಲಾಗಿದೆ.
ಗೃಹ ವ್ಯವಹಾರಗಳು, ಸಂಸ್ಕೃತಿ ಮತ್ತು ನಗರಾಭಿವೃದ್ಧಿ ಸಚಿವಾಲಯಗಳಿಗೆ ಯೋಜನೆಯ ಬಗ್ಗೆ ತಿಳಿಸಲಾಗಿದೆ ಎಂದು ವರದಿಯಾಗಿದೆ. ಇವು ಈಗಾಗಲೇ ಪತ್ರವನ್ನು ಸ್ವೀಕರಿಸಿವೆ ಮತ್ತು ಅದನ್ನು ಕಾರ್ಯಗತಗೊಳಿಸಲು ಪರಿಗಣಿಸುತ್ತಿವೆ ಎಂದು ಸೇನಾ ಮೂಲಗಳು ತಿಳಿಸಿವೆ.
ಭಾರತದ ಗಣರಾಜ್ಯೋತ್ಸವದ ಮೆರವಣಿಗೆಯು ಭಾರತದ ಮಿಲಿಟರಿ ಶಕ್ತಿ, ಸಾಂಸ್ಕೃತಿಕ ವೈವಿಧ್ಯತೆ ಮತ್ತು ರಾಷ್ಟ್ರೀಯ ಸಾಧನೆಗಳನ್ನು ಪ್ರದರ್ಶಿಸುತ್ತದೆ.
ಪ್ರಸ್ತುತ ರಕ್ಷಣಾ ಮತ್ತು ಅರೆಸೇನಾ ಘಟಕಗಳಲ್ಲಿ ಕಮಾಂಡಿಂಗ್ ಮತ್ತು ಉಪ ಪಾತ್ರಗಳಿಗೆ ಹೆಚ್ಚಿನ ಮಹಿಳೆಯರನ್ನು ಆಯ್ಕೆ ಮಾಡಲಾಗುತ್ತಿದೆ. 2015 ರಲ್ಲಿ ನಡೆದ ಗಣರಾಜ್ಯೋತ್ಸವದ ಪರೇಡ್ನಲ್ಲಿ ಮೂರು ಸೇವೆಗಳಿಂದ ಮೊದಲ ಬಾರಿಗೆ ಸಂಪೂರ್ಣ ಮಹಿಳಾ ತುಕಡಿಗಳು ಮೆರವಣಿ ನಡೆಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.