ಬೆಂಗಳೂರು: ಓಲೈಕೆ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ರಾಜ್ಯದಲ್ಲಿ ಬಿಜೆಪಿ ಮುಸ್ಲಿಂ ಮೀಸಲಾತಿಗೆ ಅನುವು ಮಾಡಿಕೊಡುವುದಿಲ್ಲ ಎಂದು ಹೇಳಿದ್ದಾರೆ.
ಹುನಗುಂಡಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿಯು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಿಷೇಧಿಸಿ ದೇಶದ ಭದ್ರತೆಯನ್ನು ಬಲಿಷ್ಠಗೊಳಿಸಿದೆ ಮತ್ತು ಕಾಂಗ್ರೆಸ್ ಈ ನಿರ್ಧಾರದ ವಿರುದ್ಧ ಇದೆ. ಬಿಜೆಪಿ ಕರ್ನಾಟಕದಲ್ಲಿ ಮುಸ್ಲಿಂ ಮೀಸಲಾತಿಗೆ ಅವಕಾಶ ನೀಡುವುದಿಲ್ಲ ಮತ್ತು ಲಿಂಗಾಯತ ಮೀಸಲಾತಿಯನ್ನು ಕಡಿಮೆ ಮಾಡಲು ಒಪ್ಪುವುದಿಲ್ಲ ಎಂದಿದ್ದಾರೆ.
ಕರ್ನಾಟಕ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಖಚಿತ ಎಂದು ಹೇಳಿರುವ ಅವರು, ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ರಾಜ್ಯದಲ್ಲಿ ಮರಳಿ ಆಡಳಿತ ನಡೆಸಲಿದೆ ಎಂದಿದ್ದಾರೆ.
ಕನಿಷ್ಠ 15 ಹೆಚ್ಚುವರಿ ಸ್ಥಾನಗಳ ಮೂಲಕ ಈ ವರ್ಷ ನಾವು ಪೂರ್ಣ ಬಹುಮತ ಪಡೆಯಲಿದ್ದೇವೆ. ಕಳೆದ ನಾಲ್ಕು ವರ್ಷಗಳಿಂದ ಯಡಿಯೂರಪ್ಪ ಮತ್ತು ಬೊಮ್ಮಾಯಿ ಸರಕಾರವು ಸಾಕಷ್ಟು ಕಾರ್ಯಗಳನ್ನು ಮಾಡಿದೆ ಎಂದಿದ್ದಾರೆ.
ಈ ಮಧ್ಯೆ ಕಾಂಗ್ರೆಸ್ ಮುಸ್ಲಿಮರ ಮೀಸಲಾತಿಯನ್ನು ಶೇ. 4 ರಿಂದ 6ಕ್ಕೆ ಹೆಚ್ಚಿಸಲಿದೆಯೇ ಎಂಬುದನ್ನು ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಒತ್ತಾಯಿಸಿದ್ದಾರೆ. ಸಾಕಷ್ಟು ಯೋಚಿಸಿ ಮೀಸಲಾತಿ ಹೆಚ್ಚಿಸಲಾಗಿದೆ. ಒಂದು ವೇಳೆ ಕಾಂಗ್ರೆಸ್ ಮುಸ್ಲಿಮರ ಮೀಸಲಾತಿಯನ್ನು ಹೆಚ್ಚಿಸಲಿದೆಯೇ ಎಂಬುದನ್ನು ಚುನಾವಣಾ ಪ್ರಚಾರ ಮುಗಿಯುವುದರೊಳಗೆ ಸಿದ್ದರಾಮಯ್ಯ ಸ್ಪಷ್ಟಪಡಿಸಬೇಕು ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.