ನವದೆಹಲಿ: ಕರ್ನಾಟಕದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ಹೈ ವೋಲ್ಟೇಜ್ ಪ್ರಚಾರ ಸೋಮವಾರ ಸಂಜೆ ಕೊನೆಗೊಂಡಿದೆ, ಈ ಹಿನ್ನೆಲೆಯಲ್ಲಿ ಇಂದು ಕರ್ನಾಟಕ ಜನತೆಗೆ ವಿಡಿಯೋ ಸಂದೇಶ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡಿಗರ ಕನಸುಗಳು ತನ್ನದೇ ಕನಸಾಗಿದ್ದು ಅದನ್ನು ಈಡೇರಿಸಲು ಬದ್ಧವಾಗಿದ್ದೇವೆ ಎಂದು ಭರವಸೆ ನೀಡಿದ್ದಾರೆ.
ಬಿಜೆಪಿಯ ಅಧಿಕೃತ ಟ್ವಿಟರ್ ಹ್ಯಾಂಡಲ್ನಲ್ಲಿ ಪೋಸ್ಟ್ ಮಾಡಿದ ವೀಡಿಯೊದಲ್ಲಿ ಪ್ರಧಾನಿ ಮೋದಿ, “ಪ್ರತಿಯೊಬ್ಬ ಕನ್ನಡಿಗನ ಕನಸು ನನ್ನ ಸ್ವಂತ ಕನಸು, ನಿಮ್ಮ ನಿರ್ಣಯವೇ ನನ್ನ ನಿರ್ಣಯ” ಎಂದು ಹೇಳಿದ್ದಾರೆ.
ದೇಶದ ಆರ್ಥಿಕತೆಯಲ್ಲಿ ಕರ್ನಾಟಕದ ಮಹತ್ವದ ಪಾತ್ರವನ್ನು ಎತ್ತಿ ಹಿಡಿದ ಪ್ರಧಾನಿ, “ಭಾರತವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಶೀಘ್ರದಲ್ಲೇ ಭಾರತವು ವಿಶ್ವದ ಅಗ್ರ ಮೂರು ದೊಡ್ಡ ಆರ್ಥಿಕತೆಗಳಲ್ಲಿ ಒಂದಾಗುವುದನ್ನು ನಾವು ಖಚಿತಪಡಿಸಿಕೊಳ್ಳಬೇಕು. ಕರ್ನಾಟಕದ ಆರ್ಥಿಕತೆಯು ಅಭಿವೃದ್ಧಿ ಹೊಂದಿದಾಗ ಮಾತ್ರ ಇದು ಸಾಧ್ಯ” ಎಂದಿದ್ದಾರೆ.
ಕರ್ನಾಟಕದಲ್ಲಿ ಡಬಲ್ ಇಂಜಿನ್ ಸರ್ಕಾರದ 3.5 ವರ್ಷಗಳ ಅವಧಿಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ, “ಬಿಜೆಪಿ ಸರ್ಕಾರದ ನಿರ್ಣಾಯಕ, ಕೇಂದ್ರೀಕೃತ ಮತ್ತು ಭವಿಷ್ಯದ ವಿಧಾನವು ಕರ್ನಾಟಕದ ಆರ್ಥಿಕತೆಗೆ ಗಣನೀಯ ಕೊಡುಗೆ ನೀಡುತ್ತಿದೆ” ಎಂದು ಹೇಳಿದರು.
ಕೋವಿಡ್ ಸಂದರ್ಭದಲ್ಲಿಯೂ ಕರ್ನಾಟಕ ಬಿಜೆಪಿಯ ನಾಯಕತ್ವದಲ್ಲಿ ವಾರ್ಷಿಕ 90 ಸಾವಿರ ಕೋಟಿ ರೂ ವಿದೇಶಿ ಬಂಡವಾಳ ಹೂಡಿಕೆಯಾಗುತ್ತಿತ್ತು. ಆದರೆ ಹಿಂದಿನ ಸರ್ಕಾರಗಳ ಅವಧಿಯಲ್ಲಿ ಕರ್ನಾಟಕವು ವಾರ್ಷಿಕ ಸುಮಾರು 30 ಸಾವಿರ ಕೋಟಿ ರೂ ವಿದೇಶಿ ಹೂಡಿಕೆಯನ್ನು ಕಂಡಿತ್ತು. ಇದು ಯುವ ಜನತೆಗೆ ಬಿಜೆಪಿಯ ಬದ್ಧತೆಯಾಗಿದೆ” ಎಂದು ಪ್ರಧಾನಿ ಹೇಳಿದರು.
My message to the people of Karnataka… pic.twitter.com/DvFGl952OV
— Narendra Modi (@narendramodi) May 9, 2023
ಕಳೆದ ಕೆಲವು ದಿನಗಳಿಂದ ಕರ್ನಾಟಕದಲ್ಲಿ ನಾನು ಪಡೆದ ಪ್ರೀತಿ- ವಾತ್ಸಲ್ಯ ಅನುಪಮವಾದದ್ದು. ಇದು ಎಲ್ಲಾ ಕ್ಷೇತ್ರಗಳಲ್ಲಿ ಕರ್ನಾಟಕವನ್ನು ನಂಬರ್ 1 ಮಾಡುವ ಸಂಕಲ್ಪವನ್ನು ಬಲಪಡಿಸುತ್ತದೆ! pic.twitter.com/NuY1ZHh9bf
— Narendra Modi (@narendramodi) May 9, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.