ನವದೆಹಲಿ: ಉತ್ತರ ಪ್ರದೇಶದಲ್ಲಿ ‘ದಿ ಕೇರಳ ಸ್ಟೋರಿ’ ಚಿತ್ರವನ್ನು ತೆರಿಗೆ ಮುಕ್ತಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಂಗಳವಾರ ಘೋಷಿಸಿದ್ದಾರೆ. ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಚಲನಚಿತ್ರವನ್ನು ನಿಷೇಧಿಸಿದ ಒಂದು ದಿನದ ನಂತರ ಆದಿತ್ಯನಾಥ್ ಅವರ ಘೋಷಣೆ ಹೊರಬಿದ್ದಿದೆ.
ಈ ಸಿನಿಮಾ ಲವ್ ಜಿಹಾದ್ಗೆ ಬಲಿಯಾಗಿ ಇಸಿಸ್ ಉಗ್ರರಾದ ಕೇರಳದ ಮಹಿಳೆಯರ ಸುತ್ತ ಸುತ್ತುತ್ತದೆ.
“ದಿ ಕೇರಳ ಸ್ಟೋರಿ” ಅನ್ನು ಉತ್ತರ ಪ್ರದೇಶದಲ್ಲಿ ತೆರಿಗೆ ಮುಕ್ತಗೊಳಿಸಲಾಗುವುದು” ಎಂದು ಯೋಗಿ ಆದಿತ್ಯನಾಥ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.
ಉತ್ತರ ಪ್ರದೇಶವು ಈಗ ಮಧ್ಯಪ್ರದೇಶದ ನಂತರ ‘ದಿ ಕೇರಳ ಸ್ಟೋರಿ’ಗೆ ತೆರಿಗೆ ಮುಕ್ತ ಸ್ಥಾನಮಾನವನ್ನು ನೀಡಿದ ಎರಡನೇ ಬಿಜೆಪಿ ಆಡಳಿತದ ರಾಜ್ಯವಾಗಿದೆ. ಕರ್ನಾಟಕದಲ್ಲಿ ಚುನಾವಣಾ ರ್ಯಾಲಿಯಲ್ಲಿ ಭಯೋತ್ಪಾದಕ ಪಿತೂರಿಗಳನ್ನು ಹೊರತಂದಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದರು.
“ನಾವು ಈಗಾಗಲೇ ಮಧ್ಯಪ್ರದೇಶದಲ್ಲಿ ಧಾರ್ಮಿಕ ಮತಾಂತರದ ವಿರುದ್ಧ ಕಾನೂನು ಮಾಡಿದ್ದೇವೆ. ಈ ಸಿನಿಮಾ ಜಾಗೃತಿ ಮೂಡಿಸುತ್ತದೆ, ಪ್ರತಿಯೊಬ್ಬರೂ ಈ ಚಿತ್ರವನ್ನು ನೋಡಬೇಕು. ಪೋಷಕರು, ಮಕ್ಕಳು ಮತ್ತು ಹೆಣ್ಣುಮಕ್ಕಳು ಇದನ್ನು ನೋಡಬೇಕು. ಅದಕ್ಕಾಗಿಯೇ ಮಧ್ಯಪ್ರದೇಶ ಸರ್ಕಾರವು ಚಲನಚಿತ್ರಕ್ಕೆ ತೆರಿಗೆ ಮುಕ್ತ ಸ್ಥಾನಮಾನವನ್ನು ನೀಡುತ್ತಿದೆ” ಎಂದು ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಅದಾ ಶರ್ಮಾ, ಯೋಗಿತಾ ಬಿಹಾನಿ, ಸಿದ್ಧಿ ಇದ್ನಾನಿ ಮತ್ತು ಸೋನಿಯಾ ಬಲಾನಿ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ದಿ ಕೇರಳ ಸ್ಟೋರಿ’ ಸುದೀಪ್ತೋ ಸೇನ್ ನಿರ್ದೇಶನದಲ್ಲಿ ಮೇ 5 ರಂದು ದೇಶಾದ್ಯಂತ ಬಿಡುಗಡೆಯಾಗಿತ್ತು.
‘The Kerala Story’ उत्तर प्रदेश में टैक्स फ्री की जाएगी।
— Yogi Adityanath (@myogiadityanath) May 9, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.