ಬೆಂಗಳೂರು: ಕರ್ನಾಟಕ ವಿಧಾನಸಬಾ ಚುನಾವಣೆ 2023ಕ್ಕೆ ಕ್ಷಣಗಣನೆ ಆರಂಭವಾಗಿದೆ. ಶಾಂತಿಯುತ ಮತದಾನಕ್ಕೆ ಸಕಲ ಸಿದ್ಥದೆಗಳನ್ನು ಕೈಗೊಳ್ಳಲಾಗುತ್ತಿದೆ. ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿದೆ. ಅಲ್ಲಲ್ಲಿ ಪೊಲೀಸರ ಹದ್ದಿನ ಕಣ್ಗಾವಲು ಇರಿಸಲಾಗಿದೆ.
ರಾಜ್ಯದಾದ್ಯಂತ 2.2 ಲಕ್ಷ ಪೊಲೀಸರನ್ನು ಚುನಾವಣಾ ಭದ್ರತೆಗೆ ನಿಯೋಜಿಸಲಾಗಿದ್ದು, ಭಾರೀ ಭದ್ರತೆಯನ್ನು ಕೈಗೊಳ್ಳಲಾಗಿದೆ. ವಿಧಾನಸಭೆ ಚುನಾವಣೆ ಮತದಾನಕ್ಕೆ 55,282 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಅದರಲ್ಲಿ 11,617 ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಿ ಅವುಗಳಿಗೆ ಪೊಲೀಸ್ ಸಿಬ್ಬಂದಿಯ ಜತೆಗೆ ಹೆಚ್ಚುವರಿಯಾಗಿ ಸಿಎಪಿಎಫ್ ಕಂಪನಿಗಳನ್ನು ನಿಯೋಜಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ರಾಜ್ಯದ ಕಮಿಷನರೇಟ್ಗಳಲ್ಲಿ ಕಮಿಷನ್ರ್ಗಳು, ಜಿಲ್ಲೆಗಳಲ್ಲಿ ಎಸ್ಪಿಗಳು ಚುನಾವಣಾ ನಿಗಾ ವಹಿಸಲಿದ್ದಾರೆ. ಚುನಾವಣಾ ಭದ್ರತೆಗೆ 304 ಡಿವೈಎಸ್ಪಿಗಳು, 991 ಇನ್ಸ್ಪೆಕ್ಟರ್ಗಳು, 2,610 ಮಂದಿ ಸಬ್ ಇನ್ಸ್ಪೆಕ್ಟರ್ಗಳು, 5,803 ಎಎಸ್ಐಗಳು, 46,421 ಮುಖ್ಯಪೇದೆಗಳು, 27,990 ಮಂದಿ ಹೋಮ್ ಗಾರ್ಡ್ಗಳು ಸೇರಿ 84,119 ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಅವಶ್ಯಕತೆಗೆ ಅನುಗುಣವಾಗಿ ಅಧಿಕಾರಿಗಳ ಸಿಬ್ಬಂದಿ ಕೊರತೆಯನ್ನು ಸರಿದೂಗಿಸಲು ಹೊರ ರಾಜ್ಯದಿಂದ 8,500 ಪೊಲೀಸ್ ಅಧಿಕಾರಿ ಸಿಬ್ಬಂದಿ ಹಾಗೂ ಗೃಹ ರಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ಪಡೆಯಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.