ಬೆಂಗಳೂರು: ಭಾರೀ ನಿರೀಕ್ಷೆ ಮೂಡಿಸಿರುವ ಕರ್ನಾಟಕ ವಿಧಾನಸಭೆ ಚುನಾವಣೆ ಆರಂಭಗೊಂಡಿದೆ. ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಅನೇಕ ಕಡೆಗಳಲ್ಲಿ ಜನರು ಸರತಿ ಸಾಲಿನಲ್ಲಿ ನಿಂತು ಮತದಾನದ ಹಕ್ಕು ಚಲಾಯಿಸುತ್ತಿದ್ದಾರೆ.
ಬೆಳಿಗ್ಗೆ 7 ಗಂಟೆಯಿಂದ ಸಂಜೆ 6ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಗಣ್ಯಾತಿಗಣ್ಯರಿಂದ ಹಿಡಿದು ಜನಸಾಮಾನ್ಯರವರೆಗೆ ಎಲ್ಲರೂ ಬೆಳಿಗ್ಗೆಯೇ ಹುಮ್ಮಸ್ಸಿನಿಂದ ಮತ ಚಲಾಯಿಸಲು ಕ್ಯೂನಲ್ಲಿ ನಿಂತಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಚುನಾವಣಾ ಕಣದಲ್ಲಿ 2615 ಅಭ್ಯರ್ಥಿಗಳು ಇದ್ದು, ಅವರ ರಾಜಕೀಯ ಭವಿಷ್ಯವನ್ನು ಮತದಾರ ಇಂದು ನಿರ್ಧರಿಸಲಿದ್ದಾನೆ. ನಗರದ 28 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 264 ಮತಗಟ್ಟೆ ನಿರ್ಮಾಣ ಮಾಡಲಾಗಿದೆ. ಮಹಿಳಾ ಮತದಾರರನ್ನ ಪ್ರೋತ್ಸಾಹಿಸಲು ಪಿಂಕ್ ಮತಗಟ್ಟೆ, ಯುವ ಮತದಾರರನ್ನ ಸೆಳೆಯಲು ಯುವ ಮತಗಟ್ಟೆ, ಸಿರಿಧಾನ್ಯ ಮತಗಟ್ಟೆ, ವಿಶೇಷ ಚೇತನ ಮತಗಟ್ಟೆ, ವಿಜ್ಞಾನ ಮತ್ತು ತಂತ್ರಜ್ಞಾನ ಮತಗಟ್ಟೆ, ಮಾಜಿ ಸೈನಿಕ ಮತಗಟ್ಟೆ, ತೃತೀಯ ಲಿಂಗಿಯ ಮತಗಟ್ಟೆ, ಕ್ರೀಡಾ ಮತಗಟ್ಟೆ ನಿರ್ಮಾಣ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.