ಬೆಂಗಳೂರು: ರಾಜ್ಯದ ಅಭಿವೃದ್ಧಿಗಾಗಿ ಮತಹಕ್ಕು ಚಲಾಯಿಸುವಂತೆ ಮತದಾರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಮನವಿ ಮಾಡಿಕೊಂಡಿದ್ದಾರೆ.
ರಾಜ್ಯ ವಿಧಾಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಮತಹಕ್ಕು ಚಲಾಯಿಸುವುದಕ್ಕೂ ಮುನ್ನ ಮುಖ್ಯಮಂತ್ರಿಗಳು ಹುಬ್ಬಳ್ಳಿಯ ಹನುಮನ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ಪಕ್ಷದ ಪ್ರಚಾರದ ರೀತಿ ಮತ್ತು ಜನರು ಪ್ರತಿಕ್ರಿಯಿಸಿದ ರೀತಿ ಬಹಳ ಸಂತೋಷವನ್ನು ತಂದಿದೆ ಎಂದು ಹೇಳಿದರು. ಇದೇ ವೇಳೆ ಕರ್ನಾಟಕ ಅಭಿವೃದ್ಧಿಗಾಗಿ ಮತ ಹಕ್ಕು ಚಲಾಯಿಸುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡರು.
ಮುಖ್ಯಮಂತ್ರಿ ಬೊಮ್ಮಾಯಿಯವರು ಶಿಗ್ಗಾಂವಿ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಈ ನಡುವೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕುಟುಂಬ ಸಮೇತರಾಗಿ ಶಿಕಾರಿಪುರದ ರಾಘವೇಂದ್ರ ಸ್ವಾಮಿ ಮಠದಲ್ಲಿ ಪೂಜೆ ಸಲ್ಲಿಸಿದರು.
ಯಡಿಯೂರಪ್ಪ ಅವರ ಪುತ್ರ ಶಿಕಾರಿಪುರದಿಂದ ಸ್ಪರ್ಧೆಗಿಳಿದಿದ್ದಾರೆ. ಶಿಕಾರಿಪುರದಲ್ಲಿ ಮತಹಕ್ಕು ಚಲಾಯಿಸಿದ ಬಳಿಕ ಮಾತನಾಡಿದ ಯಡಿಯೂರಪ್ಪ ಅವರು, ಬಿ.ವೈ.ವಿಜಯೇಂದ್ರ 40 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆಯಲಿದ್ದಾರೆ. ಸಂಪೂರ್ಣ ಬಹುಮತ ಪಡೆದು ಸರ್ಕಾರ ರಚಿಸುವ ವಿಶ್ವಾಸವಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.