ಬೆಂಗಳೂರು: ಭಾರೀ ಸದ್ದು ಮಾಡಿದ್ದ ಕರ್ನಾಟಕ ಚುನಾವಣೆ 2023 ಕೊನೆಗೂ ಮುಕ್ತಾಯವಾಗಿದೆ. ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದ್ದು, ಮೇ.13ಕ್ಕೆ ಅನಾವರಣವಾಗಲಿದೆ. ಇಂದು ಮತದಾನ ಮುಕ್ತಾಯವಾಗುತ್ತಿದ್ದಂತೆ ಹಲವು ಮಾಧ್ಯಮಗಳು ಚುನಾವಣೋತ್ತರ ಸಮೀಕ್ಷೆಯನ್ನು ಬಹಿರಂಗಪಡಿಸಿವೆ
ಬಹುತೇಕ ಸಮೀಕ್ಷೆ ಅತಂತ್ರ ವಿಧಾನಸಭೆಯ ಸುಳಿವು ನೀಡಿವೆ. ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎಂದಿವೆ. ಏಷ್ಯಾನೆಟ್ ಸುವರ್ಣನ್ಯೂಸ್ ಹಾಗೂ ಜನ್ ಕಿ ಬಾತ್ ಪ್ರಕಟಿಸಿದ ಸಮೀಕ್ಷೆಯಲ್ಲಿ ಈ ಬಾರಿ ಬಿಜೆಪಿ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ ಎನ್ನಲಾಗಿದೆ. ಆದರೆ ಕಾಂಗ್ರೆಸ್ ಕಠಿಣ ಸ್ಪರ್ಧೆ ನೀಡುವ ಭವಿಷ್ಯ ನುಡಿದಿದೆ.
ನ್ಯೂಸ್ ಆಫ್ ನೇಷನ್ ಸಮೀಕ್ಷೆಯಂತೆ ಬಿಜೆಪಿಗೆ ಸರಳ ಬಹುಮತ ಸಿಗುವ ಸಾಧ್ಯತೆ ಇದೆ. ಸಮೀಕ್ಷೆಯಂತೆ, ಬಿಜೆಪಿಗೆ 114 ಸ್ಥಾನ ಸಿಗುವ ಸಾಧ್ಯತೆ ಇದ್ದು, ಕಾಂಗ್ರೆಸ್ಗೆ 86 ಸ್ಥಾನ ಸಾಧ್ಯತೆ ಇದೆ. ಜೆಡಿಎಸ್ಗೆ 21 ಸ್ಥಾನ, ಇತರ 3 ಸ್ಥಾನ ಸಿಗುವ ಸಾಧ್ಯತೆ ಇದೆ ರಿಪಬ್ಲಿಕ್-PMARQ ಸಮೀಕ್ಷೆಯಂತೆ ಬಿಜೆಪಿಗೆ 85-100 ಸ್ಥಾನ, ಕಾಂಗ್ರೆಸ್ಗೆ 94-108, ಜೆಡಿಎಸ್ಗೆ 24-32 ಸ್ಥಾನ ಸಿಗುವ ಸಾಧ್ಯತೆ ಇದೆ. ರಿಪಬ್ಲಿಕ್-PMARQ ಸಮೀಕ್ಷೆಯಂತೆ ಇತರರಿಗೆ 2-6 ಸ್ಥಾನ ಸಾಧ್ಯತೆ ಇದೆ.
ಜೀ ನ್ಯೂಸ್-ಮ್ಯಾಟ್ರಿಜ್ ಮತದಾನೋತ್ತರ ಸಮೀಕ್ಷೆ ಪ್ರಕಟಗೊಂಡಿದೆ. ಸಮೀಕ್ಷೆ ಪ್ರಕಾರ ಕಾಂಗ್ರೆಸ್ 108ರಿಂದ 118, ಬಿಜೆಪಿ 79-89 ಸ್ಥಾನ? ಮತ್ತು JDS 25ರಿಂದ 35 ಸ್ಥಾನ ಹಾಗೂ ಇತರರಿಗೆ 2-4 ಸ್ಥಾನ ಗೆಲ್ಲುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.