ನವದೆಹಲಿ: ಮುಂದಿನ ಐದು ವರ್ಷಗಳಲ್ಲಿ ಚೀನಾ ಮತ್ತು ಅಮೆರಿಕವನ್ನು ಹಿಂದಿಕ್ಕಿ ಭಾರತದ ಆಟೋ ಕ್ಷೇತ್ರ ವಿಶ್ವದಲ್ಲೇ ಮೊದಲ ಸ್ಥಾನದಲ್ಲಿರಲಿದೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಭಾರತ ಈಗಾಗಲೇ ಜಪಾನ್ ಅನ್ನು ಹಿಂದಿಕ್ಕಿದೆ ಎಂದು ಅವರು ಹೇಳಿದ್ದಾರೆ.
ನವದೆಹಲಿಯಲ್ಲಿ ಭಾರತೀಯ ಕೈಗಾರಿಕೆಗಳ ಒಕ್ಕೂಟ ಸಿಐಐ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ದೇಶಿಸಿ ಗಡ್ಕರಿ ಈ ವಿಷಯ ತಿಳಿಸಿದರು.
ಭಾರತವನ್ನು ಉತ್ತಮಗೊಳಿಸಲು ಸರ್ಕಾರವು ಬ್ಲಾಕ್ ಮಟ್ಟದಲ್ಲಿ ಕಲ್ಯಾಣ ಯೋಜನೆಗಳನ್ನು ಜಾರಿಗೆ ತರಲು ಗಮನಹರಿಸುತ್ತಿದೆ ಎಂದರು.
ನಗರಗಳಲ್ಲಿನ ನೀರಿನ ಕೊರತೆ ಮತ್ತು ಮಾಲಿನ್ಯದಂತಹ ಸಮಸ್ಯೆಗಳಿಗೆ ತಾಂತ್ರಿಕ ಪರಿಹಾರಗಳನ್ನು ಕಂಡುಕೊಳ್ಳುವಂತೆ ಅವರು ಉದ್ಯಮಕ್ಕೆ ಮನವಿ ಮಾಡಿದರು. ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೂಡಿಕೆ ಮಾಡುವುದರಿಂದ ಉದ್ಯೋಗಾವಕಾಶಗಳನ್ನು ಸೃಷ್ಟಿಸಬಹುದು ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.