ಲಕ್ನೋ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಇಂದು ಮುಂಬೈನಲ್ಲಿರುವ ಶಿವಸೇನಾ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಅವರನ್ನು ಅವರ ನಿವಾಸ ‘ಮಾತೋಶ್ರೀ’ ಯಲ್ಲಿ ಭೇಟಿಯಾದರು.
2024ರ ಲೋಕಸಭೆ ಚುನಾವಣೆಗೆ ಮುನ್ನ ಪ್ರತಿಪಕ್ಷಗಳ ಒಗ್ಗಟ್ಟಿನ ಬಲವರ್ಧನೆಗಾಗಿ ಬಿಹಾರ ಸಿಎಂ ಈ ಭೇಟಿ ನಡೆಸಿದ್ದಾರೆ ಎಂದು ವರದಿಗಳು ತಿಳಿಸಿವೆ.
ಜನತಾ ದಳ (ಯುನೈಟೆಡ್) ಸರ್ವೋಚ್ಚ ನಾಯಕ ನಿತೀಶ್ ಕುಮಾರ್ ಮತ್ತು ರಾಷ್ಟ್ರೀಯ ಜನತಾ ದಳದ ತೇಜಸ್ವಿ ಯಾದವ್ ಅವರು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರನ್ನು ಅವರ ‘ಸಿಲ್ವರ್ ಓಕ್’ ನಿವಾಸದಲ್ಲಿ ಸಂಜೆ ಭೇಟಿಯಾಗಲಿದ್ದಾರೆ ಎಂದು ವರದಿಗಳು ತಿಳಿಸಿವೆ.
“ಕೇಂದ್ರದಲ್ಲಿ ಇರುವವರು ದೇಶಕ್ಕಾಗಿ ಕೆಲಸ ಮಾಡುತ್ತಿಲ್ಲ. ದೇಶದ ಎಲ್ಲಾ ರಾಜಕೀಯ ಪಕ್ಷಗಳು ಒಟ್ಟಾಗಿ ಕೆಲಸ ಮಾಡಲು ಒಂದಾಗಬೇಕು” ಎಂದು ಬಿಹಾರ ಸಿಎಂ ಮತ್ತು ಜೆಡಿಯು ನಾಯಕ ನಿತೀಶ್ ಕುಮಾರ್ ಮುಂಬೈನಲ್ಲಿ ಉದ್ಧವ್ ಠಾಕ್ರೆ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.