ನವದೆಹಲಿ: ಸಿಬಿಎಸ್ಇ ಮಂಡಳಿಯು ಈ ವರ್ಷದ 12ನೇ ತರಗತಿ ಫಲಿತಾಂಶ ಪ್ರಕಟಿಸಿದ್ದು, ಸರಾಸರಿ ಶೇ 87.33ರ ಫಲಿತಾಂಶ ದಾಖಲಾಗಿದೆ. ಕಳೆದ ವರ್ಷ ಶೇ 92.71ರಷ್ಟು ಫಲಿತಾಂಶ ದೊರೆತಿತ್ತು. ಈ ವರ್ಷ ಸಿಬಿಎಸ್ಇ ಕ್ಲಾಸ್ 12 ವಿದ್ಯಾರ್ಥಿಗಳ ಮೆರಿಟ್ ಲಿಸ್ಟ್ ಪ್ರಕಟಿಸುವುದಿಲ್ಲ ಎಂದು ಸಿಬಿಎಸ್ಇ ಹೇಳಿದೆ.
ದೇಶಾದ್ಯಂತ ಸುಮಾರು 16.9 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಕಳೆದ ಫೆಬ್ರುವರಿ 5ರಿಂದ ಏಪ್ರಿಲ್ 5ರ ಅವಧಿಯಲ್ಲಿ ಪರೀಕ್ಷೆಗಳು ನಡೆದಿದ್ದವು. ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳು ತಮ್ಮ ಅಂಕಗಳನ್ನು results.cbse.nic.in, cbseresults.nic.in ಅಥವಾ digilocker.gov.in ನಲ್ಲಿ ರೋಲ್ ಸಂಖ್ಯೆ, ಶಾಲಾ ಸಂಖ್ಯೆ, ಪ್ರವೇಶ ಕಾರ್ಡ್ ಐಡಿ ಮತ್ತು ಜನ್ಮ ದಿನಾಂಕವನ್ನು ಬಳಸಿಕೊಂಡು ಪರಿಶೀಲಿಸಬಹುದು ಎಂದು ಸಿಬಿಎಸ್ಇ ತಿಳಿಸಿದೆ.
ಈ ವರ್ಷ ಸುಮಾರು 17 ಲಕ್ಷ ವಿದ್ಯಾರ್ಥಿಗಳು ದೇಶಾದ್ಯಂತ CBSE 12 ನೇ ಬೋರ್ಡ್ ಪರೀಕ್ಷೆಗಳು 2023 ಗೆ ನೋಂದಾಯಿಸಿಕೊಂಡಿದ್ದಾರೆ. CBSE ಬೋರ್ಡ್ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಲು, ವಿದ್ಯಾರ್ಥಿಗಳು ಪ್ರತಿ ವಿಷಯದಲ್ಲಿ ಕನಿಷ್ಠ 33 ಶೇಕಡಾ ಅಂಕಗಳನ್ನು ಗಳಿಸಬೇಕಾಗುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.