ನವದೆಹಲಿ: ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರನ್ನು ಮುಂದಿನ ಎರಡು ವರ್ಷಗಳ ಕಾಲ ಕೇಂದ್ರೀಯ ತನಿಖಾ ದಳ (ಸಿಬಿಐ) ನಿರ್ದೇಶಕರನ್ನಾಗಿ ನೇಮಿಸಲಾಗಿದೆ. ಪ್ರಧಾನ ಮಂತ್ರಿ, ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಉನ್ನತ ಮಟ್ಟದ ಸಮಿತಿಯು ಸೂದ್ ಹೆಸರನ್ನು ಸಿಬಿಐ ನಿರ್ದೇಶಕ ಸ್ಥಾನಕ್ಕೆ ಅಂತಿಮಗೊಳಿಸಿದೆ.
ಕರ್ನಾಟಕ ಕೇಡರ್ನ 1986-ಬ್ಯಾಚ್ನ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಅವರು ಹಾಲಿ ಮುಖ್ಯಸ್ಥ ಸುಬೋಧ್ ಕುಮಾರ್ ಜೈಸ್ವಾಲ್ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಶೀಘ್ರದಲ್ಲೇ ಜೈಸ್ವಾಲ್ ಅಧಿಕಾರವಧಿ ಅಂತ್ಯಗೊಳ್ಳಲಿದೆ.
ಪ್ರಧಾನ ಮಂತ್ರಿ, ಸಿಜೆಐ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕರನ್ನು ಒಳಗೊಂಡ ಸಮಿತಿಯು ಎರಡು ವರ್ಷಗಳ ಅವಧಿಗೆ ಸಿಬಿಐ ನಿರ್ದೇಶಕರನ್ನು ಆಯ್ಕೆ ಮಾಡುತ್ತದೆ. ಅಧಿಕಾರಾವಧಿಯನ್ನು ಐದು ವರ್ಷಗಳವರೆಗೆ ವಿಸ್ತರಿಸಬಹುದು.
ಉನ್ನತ ಮಟ್ಟದ ಸಮಿತಿಯು ಮೂವರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ಸಿಬಿಐ ನಿರ್ದೇಶಕರ ಹುದ್ದೆಗೆ ಶಾರ್ಟ್ಲಿಸ್ಟ್ ಮಾಡಿತ್ತು, ನಂತರ ಸೂದ್ ಅವರ ನೇಮಕವಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.