ನವದೆಹಲಿ: ಕರ್ನಾಟಕದ ವಿಧಾನಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ನಿಷೇಧಿತ ಇಸ್ಲಾಮಿಕ್ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್ಐ)ವನ್ನು ವಿಶ್ವ ಹಿಂದೂ ಪರಿಷತ್ನ ಯುವ ಘಟಕವಾದ ಬಜರಂಗದಳದೊಂದಿಗೆ ಹೋಲಿಸಿ ನಿಷೇಧ ಮಾಡುತ್ತೇವೆ ಎಂದು ಹೇಳಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ನ್ಯಾಯಾಲಯವು ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇಂದು ಸಮನ್ಸ್ ನೀಡಿದೆ.
“ಬಜರಂಗದಳ ಹಿಂದೂಸ್ತಾನ್” ಎಂಬ ಸಂಘಟನೆಯ ಅಧ್ಯಕ್ಷ ಹಿತೇಶ್ ಭಾರದ್ವಾಜ್ ಅವರ ದೂರಿನ ಹಿನ್ನೆಲೆಯಲ್ಲಿ ಸಂಗ್ರೂರ್ ಜಿಲ್ಲಾ ನ್ಯಾಯಾಲಯವು ಕಾಂಗ್ರೆಸ್ ಅಧ್ಯಕ್ಷರಿಗೆ ಸಮನ್ಸ್ ನೀಡಿದೆ. ಹಿತೇಶ್ ಭಾರದ್ವಾಜ್ ಅವರು ಖರ್ಗೆ ವಿರುದ್ಧ 100 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹಾಕಿದ್ದಾರೆ.
ಇತ್ತೀಚೆಗೆ ಮುಕ್ತಾಯಗೊಂಡ ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ, ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ಸಿಮಿ ಮತ್ತು ಅಲ್-ಖೈದಾದಂತಹ ದೇಶ ವಿರೋಧಿ ಸಂಘಟನೆಗಳೊಂದಿಗೆ ಹೋಲಿಸಿದೆ ಎಂದು ಅರ್ಜಿದಾರರು ಹೇಳಿದ್ದಾರೆ.
ಬಜರಂಗದಳವನ್ನು ಹೆಸರಿಸುತ್ತಾ, ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಹುಸಂಖ್ಯಾತ ಅಥವಾ ಅಲ್ಪಸಂಖ್ಯಾತ ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಸಂಘಟನೆಗಳನ್ನು ನಿಷೇಧಿಸುವುದಾಗಿ ಭರವಸೆ ನೀಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.