ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ವೀಡಿಯೋ ಕಾನ್ಫರೆನ್ಸ್ ಮೂಲಕ ಹೊಸದಾಗಿ ಸೇರ್ಪಡೆಗೊಂಡವರಿಗೆ ಸುಮಾರು 71 ಸಾವಿರ ನೇಮಕಾತಿ ಪತ್ರಗಳನ್ನು ವಿತರಿಸಿದರು. ದೇಶಾದ್ಯಂತ 45 ಸ್ಥಳಗಳಲ್ಲಿ ರೋಜ್ಗಾರ್ ಮೇಳ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ, ನೂತನ ನೇಮಕಗೊಂಡವರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿಯವರು, ರೋಜ್ಗಾರ್ ಮೇಳವು ಯುವಜನರನ್ನು ಸಬಲೀಕರಣಗೊಳಿಸಲು ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಅವರ ಭಾಗವಹಿಸುವಿಕೆಯನ್ನು ಬಲಪಡಿಸುವ ಸರ್ಕಾರದ ಪ್ರಯತ್ನವಾಗಿದೆ ಎಂದು ಹೇಳಿದರು. ಇಂತಹ ರೋಜಗಾರ್ ಮೇಳವು ಯುವಜನರ ಬಗ್ಗೆ ಸರ್ಕಾರದ ಬದ್ಧತೆಯನ್ನು ಬಿಂಬಿಸುತ್ತದೆ ಎಂದರು.
ಕಳೆದ ಒಂಬತ್ತು ವರ್ಷಗಳಲ್ಲಿ, ಸರ್ಕಾರದ ನೇಮಕಾತಿ ಪ್ರಕ್ರಿಯೆಯನ್ನು ಹೆಚ್ಚು ಪಾರದರ್ಶಕ ಮತ್ತು ನ್ಯಾಯಯುತವಾಗಿ ಮಾಡಲು ಸರ್ಕಾರವು ಹೆಚ್ಚಿನ ಆದ್ಯತೆಯನ್ನು ನೀಡಿದೆ ಎಂದು ಅವರು ಹೇಳಿದರು. ಕೇಂದ್ರ ಸರ್ಕಾರದ ಇಲಾಖೆಗಳು ಹಾಗೂ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಾದ್ಯಂತ ನೇಮಕಾತಿಗಳು ನಡೆಯುತ್ತಿವೆ.
ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್ಗಾರ್ ಮೇಳವು ಒಂದು ಹೆಜ್ಜೆಯಾಗಿದೆ. ರೋಜ್ಗಾರ್ ಮೇಳವು ಮತ್ತಷ್ಟು ಉದ್ಯೋಗ ಸೃಷ್ಟಿಯಲ್ಲಿ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಯುವಜನರಿಗೆ ಅವರ ಸಬಲೀಕರಣ ಮತ್ತು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಭಾಗವಹಿಸುವಿಕೆಗೆ ಅರ್ಥಪೂರ್ಣ ಅವಕಾಶಗಳನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ.
ಹೊಸದಾಗಿ ಸೇರ್ಪಡೆಗೊಂಡವರು ಕರ್ಮಯೋಗಿ ಪ್ರಾರಂಭ್ ಮೂಲಕ ತರಬೇತಿ ಪಡೆಯಲು ಅವಕಾಶವನ್ನು ಪಡೆಯುತ್ತಾರೆ, ಇದು ವಿವಿಧ ಸರ್ಕಾರಿ ಇಲಾಖೆಗಳಲ್ಲಿ ಹೊಸದಾಗಿ ನೇಮಕಗೊಂಡವರಿಗೆ ಆನ್ಲೈನ್ ಓರಿಯಂಟೇಶನ್ ಕೋರ್ಸ್ ಆಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.