ಬೆಂಗಳೂರು: ಗ್ಯಾರಂಟಿ ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಇದೀಗ ತನ್ನ ವರಸೆ ಬದಲಾಯಿಸಿದ್ದು, ಉಚಿತ ಭರವಸೆಗಳಿಗೆ ಷರತ್ತುಗಳು ಅನ್ವಯಿಸುತ್ತದೆ ಎಂದಿದೆ. ಪ್ರಚಾರದ ಸಂದರ್ಭದಲ್ಲಿ ಎಲ್ಲರಿಗೂ ಬಿಟ್ಟಿ ಭಾಗ್ಯಗಳ ವಾಗ್ದಾನ ಮಾಡಿದ್ದ ಕಾಂಗ್ರೆಸ್ ಈಗ ಷರತ್ತುಗಳು ಅನ್ವಯ ಎನ್ನುತ್ತಿರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ್, ಕಾಂಗ್ರೆಸ್ ಗ್ಯಾರಂಟಿಗಳಿಗೆ ಕಂಡಿಷನ್ಸ್ ಇರುತ್ತದೆ. ಮೊದಲ ಕ್ಯಾಬಿನೆಟ್ನಲ್ಲೇ 5 ಗ್ಯಾರಂಟಿ ಈಡೇರಿಸುವ ಭರವಸೆ ಕೊಟ್ಟಿದ್ದೇವೆ. ಅದಕ್ಕೆ ನಾವು ಬದ್ಧರಾಗಿ ಇರುತ್ತೇವೆ. ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳಿಗೆ ಷರತ್ತುಗಳು ಇರಲಿವೆ ಎಂದು ಹೇಳಿದ್ದಾರೆ.
ಆಯಾ ಇಲಾಖೆಯ ಸಚಿವರು ಕೂತು ಗ್ಯಾರಂಟಿ ಜಾರಿ ಮಾಡುವ ಬಗ್ಗೆ ಕೆಲಸ ಮಾಡುತ್ತೇವೆ. ಹಾಗೆಯೇ ನೀಡಿದರೆ ಸುಮ್ಮನೆ ಎಲ್ಲರೂ ತೆಗೆದುಕೊಳ್ಳುತ್ತಾರೆ. ಗ್ಯಾರಂಟಿಗಳಿಗೆ ಮಾನದಂಡ ನಿಗದಿ ಮಾಡಲಾಗುವುದು ಎಂದು ವಿವರಿಸಿದರು.
ಸಿಎಂ ಆಯ್ಕೆ ವಿಚಾರವಾಗಿ ಮಾತನಾಡಿ, ಎಲ್ಲವು ಸುಸೂತ್ರವಾಗಿ ನಡೆಯುತ್ತದೆ. ಹೈಕಮಾಂಡ್ ಪ್ರಕ್ರಿಯೆ ನಡೆಸುತ್ತಿದೆ. ಈಗಾಗಲೇ ಶಾಸಕರ ಅಭಿಪ್ರಾಯ ಪಡೆದಿದ್ದಾರೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.