ನವದೆಹಲಿ: ಜಲ ಜೀವನ್ ಮಿಷನ್ 12 ಕೋಟಿ ಗ್ರಾಮೀಣ ಕುಟುಂಬಗಳಿಗೆ ನಲ್ಲಿ ನೀರು ಸರಬರಾಜು ಮಾಡುವ ಮೂಲಕ ಮತ್ತೊಂದು ಮೈಲಿಗಲ್ಲು ಸಾಧಿಸಿದೆ.
2024 ರ ವೇಳೆಗೆ ಪ್ರತಿ ಗ್ರಾಮೀಣ ಮನೆಗಳಿಗೂ ನೀರು ಸರಬರಾಜು ಮಾಡುವ ಗುರಿಯೊಂದಿಗೆ 2019 ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಈ ಮಿಷನ್ ಅನ್ನು ಘೋಷಿಸಿದರು. ಮಿಷನ್ ಘೋಷಣೆಯ ಸಂದರ್ಭ, ಹಳ್ಳಿಗಳಲ್ಲಿ ಕೇವಲ 3 ಕೋಟಿ 23 ಲಕ್ಷ ಕುಟುಂಬಗಳು ಮಾತ್ರ ಪೈಪ್ ನೀರಿನ ಸಂಪರ್ಕವನ್ನು ಹೊಂದಿದ್ದವು.
ಇಲ್ಲಿಯವರೆಗೆ ಐದು ರಾಜ್ಯಗಳು ಮತ್ತು ಮೂರು ಕೇಂದ್ರಾಡಳಿತ ಪ್ರದೇಶಗಳು 100 ಪ್ರತಿಶತ ನೀರಿನ ವ್ಯಾಪ್ತಿಯನ್ನು ವರದಿ ಮಾಡಿವೆ ಎಂದು ಜಲಶಕ್ತಿ ಸಚಿವಾಲಯ ತಿಳಿಸಿದೆ. ಈ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳೆಂದರೆ ಗೋವಾ, ತೆಲಂಗಾಣ, ಹರಿಯಾಣ, ಗುಜರಾತ್, ಪಂಜಾಬ್, ಪುದುಚೇರಿ, ದಮನ್ ಮತ್ತು ದಿಯು ಮತ್ತು ದಾದ್ರಾ ಮತ್ತು ನಗರ ಹವೇಲಿ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಅವಿರತ ಪ್ರಯತ್ನಗಳು ದೇಶದ 90 ಲಕ್ಷ ಶಾಲೆಗಳು ಮತ್ತು 90 ಲಕ್ಷದ 39 ಸಾವಿರ ಅಂಗನವಾಡಿ ಕೇಂದ್ರಗಳಲ್ಲಿ ಟ್ಯಾಪ್ ನೀರು ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಕಾರಣವಾಗಿದೆ ಎಂದು ಸಚಿವಾಲಯ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.