ನವದೆಹಲಿ: ಕರ್ನಾಟಕ ಸಿಎಂ ಆಯ್ಕೆ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಕಗ್ಗಂಟಾಗಿ ಉಳಿದಿದೆ. ಫಲಿತಾಂಶ ಬಂದು ಮೂರು ದಿನಾದರೂ ಇನ್ನೂ ಮುಂದಿನ ಸಿಎಂ ಯಾರು ಎಂದು ಹೆಸರು ಪ್ರಕಟವಾಗಿಲ್ಲ. ಈ ನಡುವೆ ಪ್ರತಿಕ್ರಿಯೆ ನೀಡಿರುವ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರು, “ಆಯ್ಕೆ ಬಗ್ಗೆ ಯಾವುದೇ ಅಂತಿಮ ನಿರ್ಧಾರವಾಗಿಲ್ಲ. 48ರಿಂದ 72 ಗಂಟೆಯೊಳಗೆ ಅಧಿಕೃತ ಘೋಷಣೆ ಹೊರಡಿಸುತ್ತೇವೆ” ಎಂದು ಹೇಳಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಇಬ್ಬರೂ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ಸಿಎಂ ಆಯ್ಕೆ ಬಗ್ಗೆ ಯಾವುದೇ ಅಂತಿಮವಾಗಿಲ್ಲ. ನಾಳೆ ಅಥವಾ ನಾಡಿದ್ದು ನೂತನ ಸಿಎಂ ಘೋಷಣೆ ಸಾಧ್ಯತೆ ಇದೆ ಎಂದು ಹೇಳಿದರು.
ಸದ್ಯ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಸಮಾಲೋಚನೆ ನಡೆಯುತ್ತಿದೆ. ಕಾಂಗ್ರೆಸ್ ನಿರ್ಧಾರ ಕೈಗೊಂಡಾಗ ನಾವು ನಿಮಗೆ ತಿಳಿಸುತ್ತೇವೆ. ಮುಂದಿನ 48-72 ಗಂಟೆಗಳಲ್ಲಿ ಕರ್ನಾಟಕದಲ್ಲಿ ಹೊಸ ಸಚಿವ ಸಂಪುಟ ರಚನೆಯಾಗಲಿದೆ ಎಂದು ಸುರ್ಜೇವಾಲಾ ಹೇಳಿದರು.
ಸಿಎಂ ಆಯ್ಕೆ ವಿಚಾರವಾಗಿ ಈಗ ಹರಿದಾಡುತ್ತಿರುವುದು ಸುಳ್ಳು ಸುದ್ದಿ ಎಂದ ಸುರ್ಜೇವಾಲ, ಶಾಸಕಾಂಗ ಪಕ್ಷದ ನಾಯಕರು ಯಾರು ಎಂಬುದು ಇನ್ನೂ ಅಂತಿಮವಾಗಿಲ್ಲ. ಇಂದು ಅಥವಾ ನಾಳೆ ಮುಖ್ಯಮಂತ್ರಿ ಯಾರು ಎಂಬ ಬಗ್ಗೆ ಎಐಸಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಆದರೆ ನಾಳೆ ಪ್ರಮಾಣವಚನ ಇರುವುದಿಲ್ಲ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.