ಬೆಂಗಳೂರು: ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರೆಂಬ ಬಹುದಿನಗಳ ಸಸ್ಪೆನ್ಸ್ ಅಂತ್ಯಗೊಂಡಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಗುರುವಾರ ಸಿದ್ದರಾಮಯ್ಯ ಅವರನ್ನು ಕರ್ನಾಟಕ ರಾಜ್ಯವನ್ನ ಮುನ್ನಡೆಸಲು ಆಯ್ಕೆ ಮಾಡಿದ್ದಾರೆ. ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವರದಿಯಾಗಿದೆ ಮತ್ತು ಮೇ 20 ರಂದು ಬೆಂಗಳೂರಿನಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಗುರುವಾರ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ಪಿ) ಸಭೆಯನ್ನು ಸಹ ಕರೆಯಲಾಗಿದೆ. ಇದಕ್ಕೂ ಮುನ್ನ ಬುಧವಾರ ಡಿಕೆ ಶಿವಕುಮಾರ್ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ, ಕರ್ನಾಟಕ ಘಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರೊಂದಿಗೆ ಹಲವು ಸಭೆಗಳನ್ನು ನಡೆಸಿದರು.
ವೇಣುಗೋಪಾಲ್ ನಿವಾಸಕ್ಕೆ ಆಗಮಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆಶಿ, “ಹೇಳಲು ಏನೂ ಇಲ್ಲ, ನಾವು ಹೈಕಮಾಂಡ್ಗೆ ಬಿಟ್ಟಿದ್ದೇವೆ, ಹೈಕಮಾಂಡ್ ಕರೆ ಮಾಡುತ್ತದೆ, ನಾನು ವಿಶ್ರಾಂತಿಗೆ ಹೋಗುತ್ತಿದ್ದೇನೆ” ಎಂದು ಹೇಳಿದರು.
224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಗೆ ಮೇ 10 ರಂದು ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆದ್ದುಕೊಂಡಿದೆ.
ಇದೇ ವೇಳೆ ಬೆಂಗಳೂರಿನಲ್ಲಿರುವ ಅವರ ಅಧಿಕೃತ ನಿವಾಸದ ಬಳಿ ಜಮಾಯಿಸಿದ ಸಿದ್ದರಾಮಯ್ಯ ಬೆಂಬಲಿಗರು ತಮ್ಮ ನಾಯಕನನ್ನು ಹೊಗಳಿ ಘೋಷಣೆಗಳನ್ನು ಕೂಗಿದರು. ಮಾಜಿ ಸಿಎಂ ನಿವಾಸದ ಎದುರು ಹಾಕಲಾಗಿದ್ದ ಅವರ ಕಟ್ಔಟ್ಗೆ ಹಾಲು ಸುರಿದು ಸಂಭ್ರಮಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.